
Ishan Kishan Makes County Debut in England
ಟೀಮ್ ಇಂಡಿಯಾ ಪರ ಭರವಸೆ ಮೂಡಿಸಿದ ಯುವ ಬ್ಯಾಟರ್ಗಳಲ್ಲಿ ಇಶಾನ್ ಕಿಶನ್ ಕೂಡ ಒಬ್ಬರು.. ಅದರಲ್ಲೂ ಆರಂಭದಲ್ಲೇ ಸ್ಪೋಟಕ ಡಬಲ್ ಸೆಂಚುರಿ ಸಿಡಿಸುವ ಮೂಲಕ ವಿಶ್ವ ದಾಖಲೆ ನಿರ್ಮಿಸಿದ್ದರು. ಆದರೆ ಆ ಬಳಿಕ ಇಶಾನ್ ಭಾರತ ತಂಡದಲ್ಲಿ ಕಾಣಿಸಿಕೊಂಡಿದ್ದು ತೀರಾ ವಿರಳ.
ಇದಾಗ್ಯೂ ಕಂಬ್ಯಾಕ್ ಪ್ರಯತ್ನ ಮುಂದುವರೆದಿದೆ. ಅದರ ಭಾಗವಾಗಿ ಇದೀಗ ಇಂಗ್ಲೆಂಡ್ನ ಕೌಂಟಿ ಕ್ರಿಕೆಟ್ನಲ್ಲಿ ಇಶಾನ್ ಹೊಸ ಇನಿಂಗ್ಸ್ ಆರಂಭಿಸಿದ್ದಾರೆ. ಯಾರ್ಕ್ಶೈರ್ ವಿರುದ್ಧದ ಈ ಪಂದ್ಯದಲ್ಲಿ 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಮಿಂಚು ಹರಿಸಿದ್ದಾರೆ. ಇಶಾನ್ ಮೊದಲ ಇನಿಂಗ್ಸ್ನಲ್ಲಿ 53 ಎಸೆತಗಳಲ್ಲಿ 6 ಫೋರ್ಗಳೊಂದಿಗೆ 44 ರನ್ ಕಲೆಹಾಕಿದ್ದಾರೆ. ಅಂದಹಾಗೆ ಇಶಾನ್ ಕಿಶನ್ ಈವರೆಗೆ ಭಾರತದ ಪರ 2 ಟೆಸ್ಟ್, 27 ಏಕದಿನ ಹಾಗೂ 32 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಟೆಸ್ಟ್ನಲ್ಲಿ 78 ರನ್ ಕಲೆಹಾಕಿದರೆ, ಏಕದಿನ ಕ್ರಿಕೆಟ್ನಲ್ಲಿ 933 ರನ್ ಗಳಿಸಿದ್ದಾರೆ. ಹಾಗೆಯೇ ಟಿ20 ಕ್ರಿಕೆಟ್ನಲ್ಲಿ 796 ರನ್ ಬಾರಿಸಿದ್ದಾರೆ.
ಭಾರತ ಮತ್ತು ಇಂಗ್ಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯದಲ್ಲಿ ಸದ್ಯಕ್ಕೆ ಟೀಂ ಇಂಡಿಯಾ ಮೇಲುಗೈ ಸಾಧಿಸಿದೆ.. ಈ ಪಂದ್ಯದಲ್ಲಿ ಕನ್ನಡಿಗ ಕೆಎಲ್ ರಾಹುಲ್ ವಿಶೇಷ ಮೈಲುಗಲ್ಲು ದಾಟಿದ್ದಾರೆ. ಅದು ಕೂಡ ಸಾವಿರ ರನ್ ಸರದಾರರ ಪಟ್ಟಿಗೆ ಸೇರ್ಪಡೆಗೊಳ್ಳುವ ಮೂಲಕ.
ಹೌದು ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ರಾಹುಲ್ ಪ್ರಥಮ ಇನಿಂಗ್ಸ್ನಲ್ಲಿ 42 ರನ್ ಬಾರಿಸಿದರು. ಇನ್ನು ದ್ವಿತೀಯ ಇನಿಂಗ್ಸ್ನಲ್ಲೂ ಅಜೇಯ 47 ರನ್ ಬಾರಿಸಿದ್ದಾರೆ. ಈ 47 ರನ್ ಗಳೊಂದಿಗೆ ಕನ್ನಡಿಗ ಆಂಗ್ಲರ ವಿರುದ್ಧ ಟೆಸ್ಟ್ ನಲ್ಲಿ ಸಾವಿರ ರನ್ ಪೂರೈಸಿ ವಿಶೇಷ ಸಾಧನೆ ಮಾಡಿದ್ದಾರೆ. ಇಂಗ್ಲೆಂಡ್ ವಿರುದ್ಧ ಈವರೆಗೆ 14 ಟೆಸ್ಟ್ ಪಂದ್ಯಗಳನ್ನಾಡಿರುವ ಕೆಎಲ್ ರಾಹುಲ್ 26 ಇನಿಂಗ್ಸ್ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ ರಾಹುಲ್,1044 ರನ್ ಗಳಿಸಿದ್ದಾರೆ. ಈ ಮೂಲಕ ಭಾರತ – ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯಲ್ಲಿ ಸಾವಿರಕ್ಕೂ ಅಧಿಕ ರನ್ ಕಲೆಹಾಕಿದ 26ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ಭಾರತದ 14ನೇ ಬ್ಯಾಟ್ಸ್ಮನ್ ಆಗಿದ್ದಾರೆ.