Ashwaveega News 24×7 ಜನವರಿ 25 : ಇದು ಸಿನಿಮಾ ಕಥೆಯಲ್ಲ, ವೆಬ್ ಸೀರಿಸ್ನ ಸ್ಕ್ರಿಪ್ಟ್ ಕೂಡ ಅಲ್ಲ. ದೇಶದ ಇತಿಹಾಸದಲ್ಲೇ ಅತಿದೊಡ್ಡ ದರೋಡೆ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದೆ. ಒಂದಲ್ಲ, ಎರಡಲ್ಲ—ಬರೋಬ್ಬರಿ ₹400 ಕೋಟಿ ಹಣವನ್ನು ಹೊತ್ತೊಯ್ಯುತ್ತಿದ್ದ ಎರಡು ಕಂಟೈನರ್ಗಳು ನಾಪತ್ತೆಯಾಗಿರುವುದು ದೇಶಾದ್ಯಂತ ಸಂಚಲನ ಮೂಡಿಸಿದೆ.
ಗೋವಾದಿಂದ ಮಹಾರಾಷ್ಟ್ರದತ್ತ ಸಾಗಾಟವಾಗುತ್ತಿದ್ದ ಎರಡು ಕಂಟೈನರ್ಗಳನ್ನು ಕರ್ನಾಟಕದ ಬೆಳಗಾವಿ ಗಡಿಭಾಗದಲ್ಲಿ ಹೈಜಾಕ್ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಭಾರೀ ರಾಬರಿ ಪ್ರಕರಣ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಛೋರ್ಲಾ ಘಾಟ್ ಪ್ರದೇಶದಲ್ಲಿ ನಡೆದಿರುವುದು ತನಿಖೆಯಿಂದ ತಿಳಿದುಬಂದಿದೆ.
2025 ಅಕ್ಟೋಬರ್ 16ರಂದು ಈ ದರೋಡೆ ನಡೆದಿದ್ದು, ಪ್ರಕರಣ ತಡವಾಗಿ ಬಹಿರಂಗವಾಗಿದೆ. ಮಹಾರಾಷ್ಟ್ರದ ರಿಯಲ್ ಎಸ್ಟೇಟ್ ಉದ್ಯಮಿ ಕಿಶೋರ್ ಶೇಟ್ ಅವರಿಗೆ ಸೇರಿದ್ದ ಸುಮಾರು ₹400 ಕೋಟಿ ಹಣವನ್ನು ಸಾಗಿಸಲಾಗುತ್ತಿತ್ತು …
ಬೆಳಗಾವಿಯಲ್ಲಿ ನಡೆದ ರಾಬರಿ ಪ್ರಕರಣ ಮಹಾರಾಷ್ಟ್ರದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದ್ದು, ಕರ್ನಾಟಕ, ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳ ಪೊಲೀಸರು ಸಂಯುಕ್ತವಾಗಿ ತನಿಖೆ ಮತ್ತು ಶೋಧ ಕಾರ್ಯ ನಡೆಸುತ್ತಿದ್ದಾರೆ.
ಪ್ರಕರಣದ ಗಂಭೀರತೆಯನ್ನು ಗಮನಿಸಿದ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿ ತನಿಖೆಗೆ ಆದೇಶ ಹೊರಡಿಸಿದ್ದಾರೆ. ಮೂರು ರಾಜ್ಯಗಳಲ್ಲಿ ತನಿಖೆ ನಡೆಯುತ್ತಿದ್ದು, ಹಣ ಸಾಗಾಟದ ಉದ್ದೇಶ, ಭದ್ರತಾ ಲೋಪ ಹಾಗೂ ಒಳಜಾಲದ ಬಗ್ಗೆ ಪೊಲೀಸರು ತೀವ್ರ ಪರಿಶೀಲನೆ ನಡೆಸುತ್ತಿದ್ದಾರೆ.
₹400 ಕೋಟಿ ಲೂಟಿ ಪ್ರಕರಣ ಇದೀಗ ದೇಶದ ಅತಿದೊಡ್ಡ ರಾಬರಿ ಪ್ರಕರಣಗಳಲ್ಲಿ ಒಂದಾಗಿ ದಾಖಲಾಗಿದ್ದು, ಮುಂದಿನ ದಿನಗಳಲ್ಲಿ ತನಿಖೆ ಯಾವ ತಿರುವು ಪಡೆಯಲಿದೆ ಎಂಬುದನ್ನು ಕಾದು ನೋಡಬೇಕಿದೆ.
