ಹಾಸನ: ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ ದಿನೆ ದಿನೆ ತಿರುವು ಪಡೆಯುತ್ತಿದ್ದು, ಬಿಜೆಪಿ ಮುಖಂಡ ಹಾಗೂ ಮಾಜಿ ಶಾಸಕ ಪ್ರೀತಂಗೌಡ ಆಪ್ತರಾಗಿದ್ದವರ ಮೂರು ಕಡೆ ಎಸ್.ಐ.ಟಿ. ತಂಡ ಮಂಗಳವಾರದಂದು ಸಂಜೆ ದಾಳಿ ನಡೆಸಿದೆ.
ಸಂಸದ ಪ್ರಜ್ವಲ್ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣದಲ್ಲಿ ಪ್ರೀತಂಗೌಡ್ರ ಆಪ್ತ ಕ್ವಾಲಿಟಿ ಬಾರ್ ಶರತ್ ಒಡೆತನದ ಬಾರ್ ಹಾಗೂ ಕಿರಣ್ ಒಡೆತನದ ಹೋಟೆಲ್ ಮೇಲೆ ದಾಳಿ
ಹಾಸನ ನಗರದ ಬಿ.ಎಂ. ರಸ್ತೆಯಲ್ಲಿರುವ ಕ್ವಾಲಿಟಿ ಬಾರ್ ಹಾಗೂ ಹೋಟೆಲ್ ಶ್ರೀಕೃಷ್ಣ ಮತ್ತು ಪುನಿತ್ ಮೇಲೆ ಎಸ್.ಐ.ಟಿ. ತಂಡವು ದಾಳಿ ನಡೆಸಿ ಕಂಪ್ಯೂಟರ್ ನಲ್ಲಿ ಸೇವ್ ಮಾಡಿರುವ ಡಿಸ್ಕ್ ನ್ನು ಪರಿಶೀಲಿಸುತ್ತಿದೆ. ಪೆನ್ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಕ್ವಾಲಿಟಿ ಬಾರ್ ಶರತ್ ವಿರುದ್ದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಾಗಿದ್ದರು ಶರತ್ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸದ್ದಾರೆ. ಇನ್ನು ಹಾಸನ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಕಿರಣ್ ಅವರ ಒಡೆತನಕ್ಕೆ ಸೇರಿರುವ ಬಾರ್ ಹಾಗೂ ಹೋಟೆಲ್ನಲ್ಲಿ ತಲಾಶ್ ನಡೆಸುತ್ತಿದೆ. ಇನ್ನು ಬಿಜೆಪಿ ಮುಖಂಡ ಪುನಿತ್ ಅವರ ಒಡೆತನಕ್ಕೆ ಸೇರಿದ ಕಛೇರಿ ಮನೆ ಮೇಲೂ ಕೂಡ ಪರಿಶೀಲನೆ ಮಾಡುತ್ತಿದೆ. ಲೋಕಸಭಾ ಚುನಾವಣೆ ವೇಳೆ ಸಂಸದ ಪ್ರಜ್ವಲ್ ರೇವಣ್ಣ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಬಂದ ಬೆನ್ನಲ್ಲೆ ಪ್ರಜ್ವಲ್ ಚುನಾವಣೆ ನಡೆದು ಮಾರನೆ ದಿವಸ ಭಾರತದಿಂದ ಜರ್ಮನ್ ಗೆ ಪಲಾಯಣ ಮಾಡಿದ್ದರು. ನಂತರದಲ್ಲಿ ರಾಜ್ಯ ಸರಕಾರ ರಚಿಸಿದ ಎಸ್.ಐ.ಟಿ. ತಂಡ ಈ ಬಗ್ಗೆ ತನಿಖೆ ನಡೆಸಲು ಆರಂಭಿಸಿ ಅನೇಕರನ್ನು ವಿಚಾರಣೆಗೆ ಒಳಪಡಿಸಿದೆ. ದಿನೆ ದಿನೆ ಈ ಪ್ರಕರಣ ತಿರುವು ಪಡೆಯುತ್ತಿದ್ದು, ತನಿಖಾಧಿಕಾರಿಗಳು ಕೂಡ ಚುರುಕಾಗಿ ಪರಿಶೀಲಿಸುತ್ತಿದ್ದಾರೆ. ಅನೇಕರನ್ನ ಬಂಧಿಸಿದಲ್ಲದೇ ಎಂಪಿ ಚುನಾವಣಾ ಏಜೆಂಟ್ ಪೂರ್ಣಚಂದ್ರ ತೇಜಸ್ವಿ ನೀಡಿದ ದೂರಿನ ಅನ್ವಯ ತನಿಖೆಗೆ ಸಂಬಂಧಿಸಿದವರ ಮೇಲೆ ದಾಳಿ ನಡೆಸಿ ಅವರನ್ನು ಬಂಧಿಸಿ ತನಿಖೆಗೆ ಒಳಪಡಿಸಲಾಗುತ್ತಿದೆ.