ಪ್ರಸ್ತುತ ಜಾರಿಯಲ್ಲಿರುವ ಶಿಕ್ಷಣ ವ್ಯವಸ್ಥೆಯ ಸಾಧಕ–ಬಾಧಕಗಳ ಕುರಿತು ಚರ್ಚಿಸಿಲ್ಲ. ರಾಜಕೀಯ ಸೇಡು ತೀರಿಸಿಕೊಳ್ಳಲು ಶಿಕ್ಷಣ ಕ್ಷೇತ್ರವನ್ನು ಅಸ್ತ್ರವಾಗಿ ಬಳಸಿಕೊಳ್ಳುವುದು ಸರಿಯಲ್ಲ ಎಂದು ವಿದ್ಯಾರ್ಥಿಗಳು, ಮುಖಂಡರ ಆಕ್ರೋಶ.
ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ಎದುರಿನ ಮಹಾತ್ಮ ಗಾಂಧಿ ಪುತ್ಥಳಿ ಬಳಿ ಇಂದು ಎನ್ ಇಪಿ ರದ್ಧತಿ ವಿರೋಧಿಸಿ ಎಬಿವಿಪಿ ಬೃಹತ್ ಪ್ರತಿಭಟನೆ ನಡೆಸಿದರು. ಪ್ರಸ್ತುತ ನಮ್ಮ ಶಿಕ್ಷಣ ಪದ್ಧತಿ ಬ್ರಿಟಿಷ್ ವಸಾಹತು ವ್ಯವಸ್ಥೆಯ ಮುಂದುವರಿದ ಭಾಗವಾಗಿದೆ. ಇದು ಗುಲಾಮಗಿರಿಯ ಮಾನಸಿಕತೆಯೂ ಹೌದು, ನಮ್ಮ ಭವ್ಯ ಇತಿಹಾಸವನ್ನು ಮರೆಮಾಚಿ ವಿದ್ಯಾರ್ಥಿಗಳಿಗೆ ದೇಶದ ಬಗ್ಗೆ ತಪ್ಪು ಮಾಹಿತಿ ನೀಡಲಾಗುತ್ತಿದೆ. ಇದೆಲ್ಲದಕ್ಕೂ ರಾಷ್ಟ್ರೀಯ ಶಿಕ್ಷಣ ನೀತಿ ಪರಿಹಾರವಾಗಿದೆ. ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾದ ತೀರ್ಮಾನವಾಗುತ್ತದೆ ಎಂದು ವಿದ್ಯಾರ್ಥಿಗಳು ಹಾಗೂ ಮುಖಂಡರು ಸರ್ಕಾರದ ವಿರುದ್ದ ಆಕ್ರೋಶ ಹೊರಹಾಕಿದರು.