ಶಿವಮೊಗ್ಗ: ಸಾಗರ ತಾಲೂಕಿನ ವಡನ್ ಬೈಲು ಸಮೀಪದ ಪದ್ಮಾವತಿ ದೇವಸ್ಥಾನದ ರಸ್ತೆಯಲ್ಲಿ ಅಪರೂಪದ ಕರಿ ಚಿರತೆ ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಭೀತಿ ಹುಟ್ಟಿಸಿದೆ. ಕಳೆದ ಕೆಲವು ದಿನಗಳಿಂದ ಈ ಕರಿ ಚಿರತೆ ಜನವಾಸ ಪ್ರದೇಶಗಳಲ್ಲಿ ಕಾಣಿಸಿಕೊಳ್ಳುತ್ತಿದ್ದು, ಇತ್ತೀಚೆಗೆ ಕಾಡಿಗೆ ಬಿಟ್ಟಿದ್ದ ಕರುವನ್ನು ಕೊಂದು ಹೊತ್ತೊಯ್ದಿರುವ ಘಟನೆ ನಡೆದಿದೆ.
ಚಿರತೆಯು ಕರುವನ್ನು ಹೊತ್ತೊಯ್ಯುತ್ತಿರುವ ದೃಶ್ಯವನ್ನು ಸ್ಥಳೀಯರು ತಮ್ಮ ಮೊಬೈಲ್ ಮೂಲಕ ಸೆರೆಹಿಡಿದಿದ್ದಾರೆ. ಇದರ ಪರಿಣಾಮ, ಸ್ಥಳೀಯರು ತಮ್ಮ ಹಸುಗಳನ್ನು ಕಾಡಿಗೆ ಮೇಯಲು ಬಿಡಲು, ಮತ್ತು ಒಂಟಿಯಾಗಿ ಓಡಾಡಲು ಹೆದರುತ್ತಿದ್ದಾರೆ.
ಚಿರತೆಯ ನಿರಂತರ ಕಾಣಿಸಿಕೊಳ್ಲುವಿಕೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಅಲ್ಲದೆ, ಇಡೀ ಅರಣ್ಯ ಪ್ರದೇಶದಲ್ಲಿ ಇನ್ನಷ್ಟು ಚಿರತೆಗಳು ಇರಬಹುದು ಎಂಬ ಶಂಕೆಯಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ, ಸಂಬಂಧಿಸಿದ ಅಧಿಕಾರಿಗಳಿಂದ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಸಾರ್ವಜನಿಕರು ಮನವಿ ಮಾಡುತ್ತಿದ್ದಾರೆ.