
ಬೆಂಗಳೂರಿನ ವಾಯು ಮಾಲಿನ್ಯ ಕಡಿಮೆ ಮಾಡಲು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ 600ಕ್ಕೂ ಹೆಚ್ಚು ಎಲೆಕ್ಟ್ರಿಕ್ ಬಸ್ಗಳನ್ನು ರಸ್ತೆಗೆ ಇಳಿಸಿದೆ. ಈ ಬಸ್ಗಳಿಗೆ ಗುತ್ತಿಗೆ ಆಧಾರದ ಮೇಲೆ ಚಾಲಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಈ ಚಾಲಕರಿಗೆ ಸರಿಯಾಗಿ ವೇತನ ನೀಡುತ್ತಿಲ್ಲ ಎಂಬ ಆರೋಪ ಕೇಳಿ ಬರುತ್ತಿದೆ.

ಬೆಂಗಳೂರು, ಮೇ 14: ಬೆಂಗಳೂರಿನ ವಾಯು ಮಾಲಿನ್ಯ ಕಡಿಮೆ ಮಾಡುತ್ತೇವೆ ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಎಲೆಕ್ಟ್ರಿಕ್ ಬಸ್ಗಳು (E-Bus) ಸರಿಯಾಗಿ ಸೇವೆ ಒದಗಿಸುತ್ತಿಲ್ಲ ಎಂಬ ಆರೋಪ ಕೇಳಿಬಂದ ಬೆನ್ನಲೇ ಇದೀಗ, ಈ ಬಸ್ಗಳ ಚಾಲಕರಿಗೆ (Drivers) ಸರಿಯಾಗಿ ವೇತನ ನೀಡುತ್ತಿಲ್ಲ ಅಂತ ಕೂಗು ಕೇಳಿಬರುತ್ತಿದೆ. ಎಲೆಕ್ಟ್ರಿಕ್ ಬಸ್ಗಳ ಚಾಲಕರು ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದು, ಇವರಿಗೆ ಸರಿಯಾಗಿ ವೇತನ ನೀಡುತ್ತಿಲ್ಲ ಎಂಬ ಆರೋಪವಿದೆ. ಈ ಸಂಬಂಧ ಚಾಲಕರು ಶಾಂತಿನಗರ ಡಿಪೋ 3ರ ಮುಂದೆ ಧರಣಿ ಮಾಡುತ್ತಿದ್ದಾರೆ.