Ashwaveega News 24×7 ಫೆಬ್ರವರಿ 16 -2026 : ₹400 ಕೋಟಿ ರೂಪಾಯಿ ದರೋಡೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದೆ. ಮಹಾರಾಷ್ಟ್ರ ಸರ್ಕಾರ ರಚಿಸಿದ್ದ ಎಸ್ಐಟಿ ತನಿಖಾ ವರದಿಯಲ್ಲಿ ಸ್ಫೋಟಕ ಅಂಶಗಳು ಹೊರಬಿದ್ದಿವೆ.
ಕರ್ನಾಟಕ – ಗೋವಾ ಗಡಿಭಾಗದಲ್ಲಿ ₹400 ಕೋಟಿ ಸಾಗಾಟವಾಗುತ್ತಿದ್ದ ಎರಡು ಕಂಟೇನರ್ಗಳನ್ನು ದರೋಡೆ ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು. ಈ ದೂರಿನ ಆಧಾರದಲ್ಲಿ ಮಹಾರಾಷ್ಟ್ರ ಸರ್ಕಾರ SIT ರಚಿಸಿ ಕಳೆದ ಒಂದು ತಿಂಗಳಿಂದ ತನಿಖೆ ನಡೆಸುತ್ತಿತ್ತು.
ಆದರೆ ಚೋರ್ಲಾ ಘಾಟ್ ಪ್ರದೇಶದಲ್ಲಿ ದರೋಡೆ ನಡೆದಿದೆ ಎಂಬುದಕ್ಕೆ ಯಾವುದೇ ಸ್ಪಷ್ಟ ಸಾಕ್ಷ್ಯ ಸಿಕ್ಕಿಲ್ಲ ಎಂದು SIT ತಿಳಿಸಿದೆ. ದೂರಿನಲ್ಲಿ ಉಲ್ಲೇಖಿಸಿದ್ದ ಸ್ಥಳ, ಸಮಯ ಹಾಗೂ ಪ್ರಯಾಣ ಮಾರ್ಗಗಳ ವಿವರಗಳಲ್ಲಿ ವ್ಯತ್ಯಾಸ ಕಂಡುಬಂದಿದೆ . ದೂರುದಾರ ಸಂದೀಪ್ ನೀಡಿದ್ದ ಆರೋಪಗಳು ಸುಳ್ಳು ಎಂದು SIT ಹೇಳಿದೆ ಎಂಬ ಮಾಹಿತಿ ಲಭ್ಯವಾಗಿದೆ …
ಇತ್ತ SIT ಮೇಲೆಯೇ ಸಂದೀಪ್ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಬೆಳಗಾವಿ ಜಿಲ್ಲೆ ಪೊಲೀಸ್ ಅಧೀಕ್ಷಕರಿಗೆ ಪತ್ರ ಬರೆದಿರುವ ಅವರು , ಮಹಾರಾಷ್ಟ್ರ SIT ಪಾರದರ್ಶಕ ತನಿಖೆ ನಡೆಸುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಕೇಸ್ಗೆ ಸಂಬಂಧಿಸಿದ ಆಡಿಯೋ ದಾಖಲೆಗಳು ನನ್ನ ಬಳಿ ಇವೆ. ಅವುಗಳ ಆಧಾರದಲ್ಲಿ ಸಮಗ್ರ ತನಿಖೆ ನಡೆಸಬೇಕು ಎಂದು ಮನವಿ ಮಾಡಿದ್ದಾರೆ.
ಒಟ್ಟಾರೆ, ₹400 ಕೋಟಿ ದರೋಡೆ ಪ್ರಕರಣ ಸತ್ಯವೇ ? ಸುಳ್ಳೇ ? ಎಂಬುದರ ಬಗ್ಗೆ ಗೊಂದಲ ಇನ್ನಷ್ಟು ಗಾಢವಾಗಿದೆ. ಮುಂದಿನ ದಿನಗಳಲ್ಲಿ ತನಿಖೆ ಯಾವ ದಿಕ್ಕಿಗೆ ಸಾಗುತ್ತದೆ ಎಂಬುದು ಕುತೂಹಲ ಮೂಡಿಸಿದೆ ….
