
KANDEELU BEST KANNADA FILM
Ashwaveega News 24×7 ಅ. 01: 2023ರ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಇಂದು ಸಂಜೆ ಘೋಷಣೆಯಾಗಿವೆ. ನವದೆಹಲಿಯ ನ್ಯಾಷನಲ್ ಮೀಡಿಯಾ ಸೆಂಟರ್ನಲ್ಲಿ ವಿಜೇತರ ಹೆಸರುಗಳನ್ನು ಘೋಷಿಸಲಾಯಿತು. ‘ಕಂದೀಲು’ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಗೆದ್ದಿದೆ.
ಬೆಸ್ಟ್ ಕನ್ನಡ ಫಿಲ್ಮ್ (ಫೀಚರ್ ಫಿಲ್ಮ್)
ಕಂದೀಲು – ದಿ ರೇ ಆಫ್ ಹೋಪ್
ನಿರ್ಮಾಪಕರು: ಸ್ವಸ್ತಿಕ್ ಎಂಟರ್ಟೈನ್ಮೆಂಟ್
ನಿರ್ದೇಶಕ: ಯಶೋದ ಪ್ರಕಾಶ್
ಬೆಸ್ಟ್ ಸ್ಕ್ರಿಪ್ಟ್ (ನಾನ್ ಫಿಚರ್ ಫಿಲ್ಮ್ಸ್) ವಿಭಾಗದಲ್ಲಿ ಮೈಸೂರಿನ ಚಿದಾನಂದ ನಾಯಕ್ ಅವರ ‘ಸನ್ಫ್ಲವರ್ಸ್ ವೇರ್ ದಿ ಫಸ್ಟ್ ಒನ್ಸ್ ಟು ನೋ’ ಪ್ರಶಸ್ತಿ ಪಡೆದುಕೊಂಡಿದೆ.
ಇನ್ನು ‘ಜವಾನ್’ ಸಿನಿಮಾದ ನಟನೆಗಾಗಿ ಶಾರುಖ್ ಖಾನ್ ಅವರು ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ‘12th ಫೇಲ್’ ಸಿನಿಮಾದ ನಟನೆಗಾಗಿ ವಿಕ್ರಾಂತ್ ಮಾಸಿ ಕೂಡ ಅತ್ಯುತ್ತಮ ನಟ ಪ್ರಶಸ್ತಿಯನ್ನು ಹಂಚಿಕೊಂಡಿದ್ದಾರೆ.
‘ಮಿಸೆಸ್ ಚಟರ್ಜಿ ವರ್ಸಸ್ ನಾರ್ವೆ’ ಸಿನಿಮಾದಲ್ಲಿನ ಅಭಿನಯಕ್ಕಾಗಿ ರಾಣಿ ಮುಖರ್ಜಿ ಅವರು ಅತ್ಯುತ್ತಮ ನಟಿ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಶಾರುಖ್ ಖಾನ್, ವಿಕ್ರಾಂತ್ ಮಾಸಿ, ರಾಣಿ ಮುಖರ್ಜಿ ಮುಂತಾದವರಿಗೆ ಅಭಿಮಾನಿಗಳು ಅಭಿನಂದನೆ ಸಲ್ಲಿಸುತ್ತಿದ್ದಾರೆ.