Ashwaveega News 24×7 ಡಿಸೆಂಬರ್. 25: 45 ಸಿನಿಮಾ ಇಂದು ಭರ್ಜರಿಯಾಗಿ ರಿಲೀಸ್ ಆಗಿದೆ. ಈ ಸಿನಿಮಾದಲ್ಲಿ ಉಪೇಂದ್ರ, ರಾಜ್ ಬಿ ಶೆಟ್ಟಿ, ಶಿವರಾಜ್ಕುಮಾರ್ ನಟಿಸಿದ್ದಾರೆ.
ಜೊತೆಗೆ 45 ಸಿನಿಮಾವು ಆರಂಭದಿಂದಲೂ ಸಾಕಷ್ಟು ನಿರೀಕ್ಷೆ ಮೂಡಿಸಿತ್ತು.ಹಾಗೆಯೇ ಅರ್ಜುನ್ ಜನ್ಯ ನಿರ್ದೇಶನದ ಮೊದಲ ಸಿನಿಮಾ ಇದಾಗಿರುದರಿಂದ ಜನರ ನಿರೀಕ್ಷೆ ಒಂದು ಹಂತ ಮೇಲೆಯೇ ಇತ್ತು. ಇದೀಗ ಈ ಸಿನಿಮಾ ತೆರೆ ಕಂಡಿದ್ದು ತಮ್ಮ ನೆಚ್ಚಿನ ನಾಯಕ ನಟರನ್ನು ಕಂಡು ಫ್ಯಾನ್ಸ್ ಫುಲ್ ಖುಷಿಯಾಗಿದ್ದಾರೆ.
ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ಸಿನಿಮಾ ಭರ್ಜರಿಯಾಗಿ ಮುನ್ನುಗ್ಗುತ್ತಿದೆ. ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಹಲವೆಡೆ 45 ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದೆ.
ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ, ರಾಜ್ ಬಿ ಶೆಟ್ಟಿ ನಟನೆಯ ಸಿನಿಮಾಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ.
ಹುಬ್ಬಳ್ಳಿಯ ಸುಧಾ ಸೇರಿ ಹಲವು ಚಿತ್ರಮಂದಿರಗಳಲ್ಲಿ ಈ ಸಿನಿಮಾ ಪ್ರದರ್ಶನ ಕಂಡಿದೆ. ಬೃಹತ್ ಹಾರ ಹಾಕಿ, ಕೇಕ್ ಕತ್ತರಿಸಿ, ಹಾಲಿನ ಅಭಿಷೇಕ ಮಾಡಿ, ಪಟಾಕಿ ಸಿಡಿಸಿ ಉಪೇಂದ್ರ ಮತ್ತು ಶಿವರಾಜ್ ಕುಮಾರ್ ಪರ ಘೋಷಣೆ ಅಭಿಮಾನಿಗಳು ಸಂಭ್ರಮಿಸಿದ್ದಾರೆ.
