Ashwaveega News 24×7 ಮಾರ್ಚ್ 01 – 2026 ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಉಂಟಾದ ಉದ್ವಿಗ್ನ ಪರಿಸ್ಥಿತಿಯಿಂದ ಸಿಲುಕಿರುವವರ ಕುರಿತು ಮಾಜಿ ಸಚಿವ ನಾಗೇಂದ್ರ ಅವರು ಮುಖ್ಯಮಂತ್ರಿ Siddaramaiah ಅವರಿಗೆ ದೂರವಾಣಿ ಮೂಲಕ ಮಾಹಿತಿ ನೀಡಿದ್ದಾರೆ. ಒಟ್ಟಾರೆಯಾಗಿ 52 ಮಂದಿ ಸಿಲುಕಿಕೊಂಡಿದ್ದಾರೆ ಎಂದು ನಾಗೇಂದ್ರ ತಿಳಿಸಿದ್ದಾರೆ. ಇವರಲ್ಲಿ ಬಳ್ಳಾರಿ ಜಿಲ್ಲೆಯ 32 ಮಂದಿ ಇದ್ದಾರೆ ಎಂಬ ಮಾಹಿತಿ ನೀಡಿದ್ದಾರೆ.
“ ದುಬೈಗೆ ಟೂರ್ಗೆ ಹೋಗಿದ್ದರು ಅಣ್ಣ… ವಾಪಸ್ ಬರಲು ಹೊರಟಾಗ ಈ ರೀತಿಯ ಪರಿಸ್ಥಿತಿ ಉಂಟಾಗಿದೆ. ಮಾರ್ಚ್ 2ರವರೆಗೆ ಯಾವುದೇ ಫ್ಲೈಟ್ ಇಲ್ಲ ಎಂದು ತಿಳಿಸಿದ್ದಾರೆ ” ಎಂದು ನಾಗೇಂದ್ರ ಅವರು ಸಿಎಂಗೆ ವಿವರಿಸಿದ್ದಾರೆ .
ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಕ್ಷಣ ಸಂಬಂಧಿತ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಸಿಲುಕಿರುವವರ ಸುರಕ್ಷಿತ ವಾಪಸಾತಿಗಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ಹಾಗೂ ಭಾರತೀಯ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿದ್ದು , ಸಿಲುಕಿರುವ ಕನ್ನಡಿಗರಿಗೆ ಅಗತ್ಯ ನೆರವು ಒದಗಿಸುವ ಕಾರ್ಯ ಮುಂದುವರಿದಿದೆ ಎಂದು ತಿಳಿದುಬಂದಿದೆ.
ಸಂಕಷ್ಟ ಪರಿಸ್ಥಿತಿಯಲ್ಲಿ ಆತಂಕಪಡಬಾರದು ಎಂದು ಸರ್ಕಾರ ಮನವಿ ಮಾಡಿದ್ದು, ಸಿಲುಕಿರುವವರ ಕುಟುಂಬಸ್ಥರಿಗೆ ಭರವಸೆ ನೀಡಲಾಗಿದೆ.
