Ashwaveega News 24×7 ಜನವರಿ 23 : ಸ್ವಿಟ್ಜರ್ಲ್ಯಾಂಡ್ನ ಡಾವೋಸ್ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಂ ವೇಳೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸಿಎಂ ಸ್ಥಾನ ನನಗೆ ಸಿಗುವ ಬಗ್ಗೆ ಯಾವುದೇ ಸಂಶಯವಿಲ್ಲ ಎಂದು ಡಿಕೆಶಿ ಸ್ಪಷ್ಟವಾಗಿ ಹೇಳಿದ್ದಾರೆ. ರಾಷ್ಟ್ರೀಯ ಸುದ್ದಿ ವಾಹಿನಿಯೊಂದರೊಂದಿಗೆ ಮಾತನಾಡಿದ ಅವರು,
“ನನ್ನ ಕಾಂಗ್ರೆಸ್ ನಾಯಕರು ನನ್ನನ್ನು ಕೈಬಿಡೋದಿಲ್ಲ. ರಾಷ್ಟ್ರಮಟ್ಟದಲ್ಲಿ ನಾಯಕತ್ವ ಇನ್ನಷ್ಟು ಬಲವಾಗಬೇಕೆಂದರೆ ನನಗೆ ಸಿಎಂ ಸ್ಥಾನ ನೀಡುತ್ತಾರೆ ಅನ್ನೋ ಭರವಸೆ ನನಗಿದೆ” ಎಂದು ಹೇಳಿದ್ದಾರೆ.
ನಾನು ಸಂಪೂರ್ಣ ಪಾಸಿಟಿವ್ ಆಗಿದ್ದೇನೆ. ನನ್ನ ಹಾರ್ಡ್ವರ್ಕ್ಗೆ ಖಂಡಿತ ಫಲ ಸಿಗುತ್ತದೆ ಅಂತ ಡಿಕೆಶಿ ವಿಶ್ವಾಸ ವ್ಯಕ್ತಪಡಿಸಿದರು .ನಾಯಕತ್ವ ಬದಲಾವಣೆ ವಿಚಾರದಲ್ಲಿ ಬಹುಬೇಗ ತೀರ್ಮಾನ ಆಗಲಿದೆ ಅಂತೆ . ಸಿಎಂ ಬದಲಾವಣೆ ಕುರಿತಂತೆ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಕ್ಕೆ ನಾನು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಇಬ್ಬರೂ ಬದ್ಧರಾಗಿದ್ದೇವೆ ಎಂದು ಸ್ಪಷ್ಟಪಡಿಸಿದರು.
ಶಾಸಕರ ಬೆಂಬಲದ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಹೇಳಿದ ಅವರು,
“ನನ್ನ ನಂಬರ್ 140, ಸಿದ್ದರಾಮಯ್ಯ ಅವರ ನಂಬರ್ ಕೂಡ 140” ಎಂದು ಮಹತ್ವದ ಹೇಳಿಕೆ ನೀಡಿದ್ದಾರೆ. ಹೈಕಮಾಂಡ್ ನನ್ನನ್ನು ಕೈಬಿಡುವುದಿಲ್ಲ ಅನ್ನೋ ನಂಬಿಕೆ ನನಗಿದೆ ಅಂತ ಡಾವೋಸ್ನಲ್ಲಿ ನಡೆದ ವರ್ಲ್ಡ್ ಎಕನಾಮಿಕ್ ಫೋರಂ ಭೇಟಿಯಲ್ಲಿಯೇ ತಮ್ಮ ವಿಶ್ವಾಸವನ್ನು ಬಹಿರಂಗಪಡಿಸಿದ್ದಾರೆ
ಒಟ್ಟಾರೆ, ಸಿಎಂ ಸ್ಥಾನಕ್ಕೆ ಸಂಬಂಧಿಸಿದ ರಾಜಕೀಯ ಚರ್ಚೆಗಳು ತೀವ್ರವಾಗುತ್ತಿರುವ ನಡುವೆಯೇ,
ಡಿ.ಕೆ.ಶಿವಕುಮಾರ್ ಅವರ ಈ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.
