Ashwaveega News 24×7 ಫೆಬ್ರವರಿ 09 -2026 – ಬೆಂಗಳೂರು : ಬಿಎಂಟಿಸಿ ಬಸ್ಗೆ ಬ್ರೇಕ್ ಫೇಲ್ ಆದ ಪರಿಣಾಮ, ಕಮಲನಗರ ಬಸ್ ನಿಲ್ದಾಣದ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಘಟನೆ ಸ್ಥಳೀಯರಲ್ಲಿ ಭಾರೀ ಆತಂಕ ಮೂಡಿಸಿದೆ.
ಡಕೋಟ ಮಾದರಿಯ ಬಿಎಂಟಿಸಿ ಬಸ್ ನಿಯಂತ್ರಣ ತಪ್ಪಿ, ನೋಡ ನೋಡ್ತಿದ್ದಂತೆ ರಸ್ತೆಯಲ್ಲಿ ಸಾಗುತ್ತಿದ್ದ ಜನರ ಕಡೆಗೆ ನುಗ್ಗಿದೆ. ಮೊದಲು ಒಂದು ಆಟೋಗೆ ಡಿಕ್ಕಿ ಹೊಡೆದ ಬಸ್, ನಂತರ ಬೈಕ್ ಮೇಲೆ ಹರಿದಿದೆ. ಅಪಘಾತದ ದೃಶ್ಯ ಎದೆ ಝಲ್ ಎನಿಸುವಂತಿದ್ದು, ಕ್ಷಣಮಾತ್ರದಲ್ಲಿ ದೊಡ್ಡ ಅನಾಹುತ ತಪ್ಪಿದೆ.
ಘಟನೆ ವೇಳೆ ರಸ್ತೆಬದಿ ನಿಂತಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅದೃಷ್ಟವಶಾತ್, ಈ ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಅಪಘಾತದ ಸಂಪೂರ್ಣ ದೃಶ್ಯಾವಳಿ ಸಮೀಪದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬಸ್ನ ಬ್ರೇಕ್ ಫೇಲ್ ಆಗಿರುವುದೇ ಅಪಘಾತಕ್ಕೆ ಪ್ರಮುಖ ಕಾರಣ .
ಘಟನೆ ಸಂಬಂಧ ಸ್ಥಳಕ್ಕೆ ಪೊಲೀಸರು ಹಾಗೂ ಬಿಎಂಟಿಸಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ನಗರದಲ್ಲಿ ಹಳೆಯ ಬಸ್ಗಳ ಸಂಚಾರದ ಬಗ್ಗೆ ಮತ್ತೆ ಪ್ರಶ್ನೆಗಳು ಎದ್ದಿದ್ದು, ಸಾರ್ವಜನಿಕ ಸುರಕ್ಷತೆ ಕುರಿತ ಚರ್ಚೆ ತೀವ್ರವಾಗಿದೆ.
