Ashwaveega News 24×7 ಫೆಬ್ರವರಿ 15 -2026 ಮುಂಬೈ, ಫೆ.15 : ಮಹಾರಾಷ್ಟ್ರ ರಾಜಧಾನಿ ಮುಂಬೈನಲ್ಲಿ ಮೆಟ್ರೋ ಕಾಮಗಾರಿಯ ವೇಳೆ ಭಾರೀ ಅವಘಡ ಸಂಭವಿಸಿದೆ. ನಗರದ ಮುಲುಂಡ್ West ಪ್ರದೇಶದಲ್ಲಿ ಮೆಟ್ರೋ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ಸಂದರ್ಭದಲ್ಲಿ ಕಾಂಕ್ರೀಟ್ ಚಪ್ಪಡಿ ಕುಸಿದು ದುರಂತ ನಡೆದಿದೆ.
ಚಲಿಸುತ್ತಿದ್ದ ಆಟೋ ರಿಕ್ಷಾ ಹಾಗೂ ಕಾರಿನ ಮೇಲೆ ಭಾರೀ ಕಾಂಕ್ರೀಟ್ ಚಪ್ಪಡಿ ಬಿದ್ದ ಪರಿಣಾಮ ಎರಡೂ ವಾಹನಗಳು ಸಂಪೂರ್ಣ ಜಖಂ ಆಗಿವೆ. ಸ್ಥಳದಲ್ಲೇ ಭಾರೀ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಅವಘಡದಲ್ಲಿ ಒಬ್ಬರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಅವಘಡದ ನಿಖರ ಕಾರಣ ತಿಳಿಯಲು ತನಿಖೆ ಮುಂದುವರಿದಿದೆ.
ಮೆಟ್ರೋ ಕಾಮಗಾರಿಗಳ ಸುರಕ್ಷತೆ ಕುರಿತು ಮತ್ತೆ ಪ್ರಶ್ನೆಗಳು ಉದ್ಭವಿಸಿರುವ ಹಿನ್ನೆಲೆ, ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
