Ashwaveega News 24×7 ಫೆಬ್ರವರಿ 17 -2026 : ಪ್ರಸಿದ್ಧ ರಿಯಾಲಿಟಿ ಶೋ ಸ್ಪರ್ಧಿಯಾಗಿದ್ದ ನಟಿಯೊಬ್ಬರಿಗೆ ಖಾಸಗಿ ವಿಡಿಯೋ ಆಧಾರವಾಗಿ ಬ್ಲ್ಯಾಕ್ಮೇಲ್ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಬಾತ್ರೂಂನಲ್ಲಿ ಚಿತ್ರೀಕರಿಸಲಾದ ವಿಡಿಯೋವನ್ನು ಬಳಸಿಕೊಂಡು ಅಪರಿಚಿತ ವ್ಯಕ್ತಿಯೊಬ್ಬ ಹಣಕ್ಕಾಗಿ ಬೆದರಿಕೆ ಹಾಕಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ಇತ್ತೀಚೆಗೆ ಮಹಿಳಾ ಕ್ರಿಕೆಟ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನಟಿ, ಕೊರಮಂಗಲದ Koramangala Indoor Stadium ಗೆ ಭೇಟಿ ನೀಡಿದ್ದರು . ಈ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ವಿಡಿಯೋ ಮತ್ತು ಫೋಟೋಗಳನ್ನು ತೆಗೆದಿರುವ ಶಂಕೆ ವ್ಯಕ್ತವಾಗಿದೆ .
ನಂತರ “Swan.370722” ಎಂಬ ಇನ್ಸ್ಟಾಗ್ರಾಮ್ ಖಾತೆಯಿಂದ ನಟಿಯ ಸ್ನೇಹಿತೆಗೆ ಖಾಸಗಿ ವಿಡಿಯೋ ಕಳುಹಿಸಿ, “ವಿಡಿಯೋ ರಿಲೀಸ್ ಮಾಡಬಾರದು ಅಂದ್ರೆ ಹಣ ಕೊಡಿ” ಎಂದು ಬೇಡಿಕೆ ಇಟ್ಟಿದ್ದಾನೆ . ಅಲ್ಲದೇ ನಟಿಗೆ ನೇರವಾಗಿ ವಿಡಿಯೋ ಕಾಲ್ ಮಾಡಿ ಬೆದರಿಕೆ ಹಾಕಿ, ಹಣ ನೀಡದಿದ್ದರೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹಂಚುವುದಾಗಿ ಎಚ್ಚರಿಕೆ ನೀಡಿದ್ದಾನೆ ಎಂದು ತಿಳಿದುಬಂದಿದೆ.
ಈ ಘಟನೆಗೆ ಸಂಬಂಧಿಸಿ ನಟಿ ಸೈಬರ್ ಕ್ರೈಮ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಎಫ್ಐಆರ್ ದಾಖಲಾಗಿದೆ. ಆರೋಪಿಯನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಸಾಮಾಜಿಕ ಜಾಲತಾಣಗಳ ದುರುಪಯೋಗ ಮತ್ತು ಸೈಬರ್ ಅಪರಾಧಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಮಾತುಗಳು ಕೇಳಿಬರುತ್ತಿವೆ. ಪ್ರಕರಣದ ತನಿಖೆ ಮುಂದುವರಿದಿದೆ.
