Ashwaveega News 24×7 ಫೆಬ್ರವರಿ 17 -2026 : ರಾಜಧಾನಿ ಬೆಂಗಳೂರಿನಲ್ಲಿ ಆಸ್ತಿಗಾಗಿ ತಂದೆಯನ್ನೇ ಹತ್ಯೆಗೈದ ದುರ್ಘಟನೆ ಬೆಳಕಿಗೆ ಬಂದಿದೆ. ಮಗನ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದ 70 ವರ್ಷದ ಮುನಿಕೃಷ್ಣ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಮೃತ ಮುನಿಕೃಷ್ಣ ಅವರು Bangalore Metropolitan Transport Corporation (ಬಿಎಂಟಿಸಿ) ನಿವೃತ್ತ ಕಂಡಕ್ಟರ್ ಆಗಿದ್ದರು .
ಕಳೆದ ಎರಡು ದಿನಗಳ ಹಿಂದೆ ಆಸ್ತಿ ವಿಚಾರವಾಗಿ ತಂದೆ-ಮಗನ ನಡುವೆ ವಾಗ್ವಾದ ನಡೆದಿದ್ದು, ಅದು ಗಲಾಟೆಗೆ ತಿರುಗಿದೆ. ಈ ವೇಳೆ ಮೋಹನ್ ಕುಮಾರ್ ಎಂಬಾತ ಹಾಕಿ ಸ್ಟಿಕ್ ಹಾಗೂ ಕಬ್ಬಿಣದ ರಾಡ್ನಿಂದ ತಂದೆಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ . ಗಂಭೀರವಾಗಿ ಗಾಯಗೊಂಡ ಮುನಿಕೃಷ್ಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದಿದ್ದಾರೆ .
ತಂದೆ-ಮಕ್ಕಳ ನಡುವೆ ಆಸ್ತಿ ವಿಚಾರವಾಗಿ ಹಲವು ಬಾರಿ ಜಗಳ ನಡೆದಿದ್ದುದಾಗಿ ತಿಳಿದುಬಂದಿದೆ. ಪ್ರಕರಣ ಸಂಬಂಧ ಇಂದಿರಾನಗರ ಪೊಲೀಸರು ಮೋಹನ್ ಕುಮಾರ್ರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ .
ಕುಟುಂಬ ಕಲಹ ಕೊನೆಗೆ ದುರಂತಕ್ಕೆ ದಾರಿ ಮಾಡಿಕೊಟ್ಟಿರುವ ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ . ಪ್ರಕರಣದ ತನಿಖೆ ಮುಂದುವರಿದಿದೆ.
