Ashwaveega News 24×7 ಫೆಬ್ರವರಿ 18 -2026 ಬೆಂಗಳೂರು : ರಾಜ್ಯದಲ್ಲಿ ಬಸ್ ಸೇವೆ ಬಗ್ಗೆ ಗೊಂದಲ ಎದುರಾಗಿದೆ. KSRTC, BMTC, NWKRTC ಮತ್ತು KKRTC ನೌಕರರು ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದು, ನಾಳೆ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.
38 ತಿಂಗಳ ವೇತನ ಹಿಂಬಾಕಿ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಸಾರಿಗೆ ಸಿಬ್ಬಂದಿ ಸಂಘಟನೆಗಳು ಶಾಂತಿಯುತ ಮುಷ್ಕರಕ್ಕೆ ಕರೆ ನೀಡಿದ್ದಾರೆ. ನಾಳೆ ಬೆಳಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ Freedom Park ನಲ್ಲಿ ಭಾರೀ ಪ್ರತಿಭಟನೆ ನಡೆಯಲಿದೆ.
ನಾಲ್ಕು ಸಾರಿಗೆ ನಿಗಮಗಳ ನೌಕರರು ಬೀದಿಗಿಳಿಯಲಿದ್ದು, ಸರ್ಕಾರ ತಕ್ಷಣವೇ ಬೇಡಿಕೆ ಈಡೇರಿಸದಿದ್ದರೆ ಬಸ್ ಸೇವೆ ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ನಾಳೆ ಸಂಜೆಯೊಳಗೆ ಸರ್ಕಾರದಿಂದ ಸ್ಪಷ್ಟ ಭರವಸೆ ಸಿಗದಿದ್ದಲ್ಲಿ, ನಾಡಿದ್ದು ರಾಜ್ಯವ್ಯಾಪಿ ಬಸ್ ಬಂದ್ ಮಾಡಲು ಸಂಘಟನೆಗಳು ತೀರ್ಮಾನಿಸಿರುವುದಾಗಿ ಮೂಲಗಳು ತಿಳಿಸಿವೆ .
ಪ್ರತಿಭಟನೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಪರ್ಯಾಯ ಸಾರಿಗೆ ವ್ಯವಸ್ಥೆಗಳನ್ನು ಮಾಡಿಕೊಂಡುಕೊಳ್ಳುವಂತೆ ಸೂಚಿಸಲಾಗಿದೆ. ರಾಜ್ಯದಲ್ಲಿ ಸಾರಿಗೆ ಸೇವೆ ವ್ಯತ್ಯಯವಾಗುವ ಸಾಧ್ಯತೆ ಇರುವುದರಿಂದ ಪ್ರಯಾಣಿಕರಲ್ಲಿ ಆತಂಕ ಹೆಚ್ಚಾಗಿದೆ .
