Ashwaveega News 24×7 ಮಾರ್ಚ್ 01 – 2026 ಬೆಂಗಳೂರು : ಇರಾನ್ ಮೇಲೆ ಅಮೆರಿಕಾ ಹಾಗೂ ಇಸ್ರೇಲ್ ನಡೆಸಿದ ಜಂಟಿ ದಾಳಿಯ ಹಿನ್ನೆಲೆ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ದುಬೈನಲ್ಲಿ 150ಕ್ಕೂ ಹೆಚ್ಚು ಕನ್ನಡಿಗರು ಸಿಲುಕಿದ್ದಾರೆ ಎಂದು ರಾಜ್ಯ ಗೃಹ ಸಚಿವ Dr. G. Parameshwara ತಿಳಿಸಿದ್ದಾರೆ .
ಬೆಂಗಳೂರಿನಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಸೇರಿದಂತೆ 150ಕ್ಕೂ ಹೆಚ್ಚು ಕನ್ನಡಿಗರು ದುಬೈನಲ್ಲಿ ಸಿಲುಕಿರುವ ಮಾಹಿತಿ ಸರ್ಕಾರಕ್ಕೆ ಲಭ್ಯವಾಗಿದೆ ಎಂದರು. ವಿಶೇಷವಾಗಿ ಚಿಕ್ಕಬಳ್ಳಾಪುರ ಮೂಲದ ಕೆಲವು ವಿದ್ಯಾರ್ಥಿಗಳು ದುಬೈನಲ್ಲಿ ಸಿಲುಕಿರುವ ಮಾಹಿತಿ ದೊರೆತಿದೆ ಎಂದು ಹೇಳಿದರು .
ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವ ಸಂಬಂಧ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೇಂದ್ರ ಸರ್ಕಾರ ಹಾಗೂ ಭಾರತೀಯ ರಾಯಭಾರ ಕಚೇರಿಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಪರಿಸ್ಥಿತಿ ಪರಿಶೀಲನೆ ಮಾಡಲಾಗುತ್ತಿದೆ ಎಂದು ಗೃಹ ಸಚಿವರು ಸ್ಪಷ್ಟಪಡಿಸಿದರು .
“ಸಿಲುಕಿರುವವರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾರೂ ಆತಂಕಪಡಬಾರದು” ಎಂದು ಪರಮೇಶ್ವರ್ ಮನವಿ ಮಾಡಿದ್ದಾರೆ .
ಮಧ್ಯಪ್ರಾಚ್ಯದ ಪರಿಸ್ಥಿತಿ ಇನ್ನೂ ಉದ್ವಿಗ್ನವಾಗಿರುವ ಹಿನ್ನೆಲೆಯಲ್ಲಿ, ಮುಂದಿನ ಬೆಳವಣಿಗೆಗಳನ್ನಾಧರಿಸಿ ಹೆಚ್ಚುವರಿ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ರಾಜ್ಯ ಸರ್ಕಾರ ಪರಿಸ್ಥಿತಿಯನ್ನು ನಿಕಟವಾಗಿ ಗಮನಿಸುತ್ತಿದ್ದು, ಕನ್ನಡಿಗರ ಸುರಕ್ಷತೆ ನಮ್ಮ ಮೊದಲ ಆದ್ಯತೆ ಎಂದು ಗೃಹ ಸಚಿವರು ಭರವಸೆ ನೀಡಿದ್ದಾರೆ.
