Ashwaveega News 24×7 ಮಾರ್ಚ್ 01 – 2026 ದುಬೈ : ಮಧ್ಯಪ್ರಾಚ್ಯದಲ್ಲಿ ಉದ್ಭವಿಸಿದ ಯುದ್ಧ ಪರಿಸ್ಥಿತಿಯ ಪರಿಣಾಮವಾಗಿ ಕಾಂಗ್ರೆಸ್ ಶಾಸಕ Nara Bharath Reddy ದುಬೈನಲ್ಲಿ ಸಿಲುಕಿರುವ ಮಾಹಿತಿ ಲಭ್ಯವಾಗಿದೆ. ಈ ಕುರಿತು ಮಾಜಿ ಸಚಿವ B. Nagendra ಅವರು ಮುಖ್ಯಮಂತ್ರಿ Siddaramaiah ಅವರಿಗೆ ದೂರವಾಣಿ ಮೂಲಕ ಮಾಹಿತಿ ನೀಡಿದ್ದಾರೆ.
ಬಳ್ಳಾರಿಯ 32 ಮಂದಿ ಹಾಗೂ ಸಿರುಗುಪ್ಪದ 20 ಮಂದಿ ಸೇರಿ ಒಟ್ಟು 52 ಕನ್ನಡಿಗರು ಮಧ್ಯಪ್ರಾಚ್ಯದಲ್ಲಿ ಸಿಲುಕಿಕೊಂಡಿದ್ದಾರೆ. ಇವರಲ್ಲಿ ಬಹುತೇಕರು ರೈತರು ಆಗಿದ್ದು, ವಿದೇಶ ಪ್ರವಾಸಕ್ಕಾಗಿ ತೆರಳಿದ್ದರು .
ಯುದ್ಧ ಹಿನ್ನೆಲೆ ಏರ್ಸ್ಪೇಸ್ ಕ್ಲೋಸ್ ಆಗಿರುವುದರಿಂದ ಏರ್ಪೋರ್ಟ್ಗೆ ಪ್ರವೇಶವಿಲ್ಲದೆ, ಸಿಲುಕಿರುವವರು ಖಾಸಗಿ ಹೋಟೆಲ್ಗಳಲ್ಲಿ ತಂಗಿದ್ದಾರೆ. ವಿಮಾನ ಹಾರಾಟ ಆರಂಭವಾಗುವ ನಿರೀಕ್ಷೆಯಲ್ಲಿ ಎಲ್ಲರೂ ಕಾಯುತ್ತಿದ್ದಾರೆ. “ಸಿಎಂಗೆ ಮಾಹಿತಿ ನೀಡಿದ್ದೇನೆ. ಎಲ್ಲರನ್ನೂ ಸುರಕ್ಷಿತವಾಗಿ ಕರೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುತ್ತದೆ ಎಂದು ರೈತರಿಗೆ ತಿಳಿಸಿದ್ದೇನೆ” ಎಂದು ನಾಗೇಂದ್ರ ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು, ಸಿಲುಕಿರುವ ಕನ್ನಡಿಗರ ಸುರಕ್ಷಿತ ವಾಪಸಾತಿಗಾಗಿ ಸಂಬಂಧಿತ ಇಲಾಖೆಗಳು ಹಾಗೂ ಕೇಂದ್ರ ಸಂಸ್ಥೆಗಳೊಂದಿಗೆ ಸಂಯೋಜನೆ ನಡೆಸುವಂತೆ ಸೂಚಿಸಿದ್ದಾರೆ .
ರಾಜ್ಯ ಸರ್ಕಾರ ಪರಿಸ್ಥಿತಿಯನ್ನು ನಿಕಟವಾಗಿ ಗಮನಿಸುತ್ತಿದ್ದು, ಕನ್ನಡಿಗರ ಸುರಕ್ಷತೆ ಮೊದಲ ಆದ್ಯತೆ ಎಂದು ಮೂಲಗಳು ತಿಳಿಸಿವೆ.
