Ashwaveega News 24×7 ಮಾರ್ಚ್ 06 – 2026 : ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತೊಮ್ಮೆ ಗರಿಷ್ಠ ಮಟ್ಟಕ್ಕೇರಿದೆ. ಇರಾನ್ ವಿರುದ್ಧ ಅಮೆರಿಕ ಮತ್ತು ಇಸ್ರೇಲ್ ದಾಳಿಗಳು ತೀವ್ರಗೊಂಡಿರುವ ಹಿನ್ನೆಲೆ ಪರಿಸ್ಥಿತಿ ಆತಂಕಕಾರಿಯಾಗಿ ಪರಿಣಮಿಸಿದೆ. ಇರಾನ್ನ ಡ್ರೋನ್ಗಳನ್ನು ಸಂಗ್ರಹಿಸಿದ್ದ ನೌಕೆಯನ್ನು ಅಮೆರಿಕ ಹೊಡೆದುರುಳಿಸಿದೆ. ಮತ್ತೊಂದೆಡೆ ಟೆಹ್ರಾನ್ ನಗರದಲ್ಲಿ ಕ್ಷಿಪಣಿಗಳ ಸುರಿಮಳೆ ಸುರಿದಿದೆ ಎಂಬ ವರದಿಗಳು ಹೊರಬಿದ್ದಿವೆ.
ಇರಾನ್ ಮೇಲೆ ಮತ್ತೆ ಮುಗಿಬಿದ್ದಿದೆ ವಿಶ್ವದ ದೊಡ್ಡಣ್ಣ ಅಮೆರಿಕ. ಇರಾನ್ ನೌಕಾಪಡೆಯ ಪ್ರಮುಖ ನೌಕೆಯೊಂದನ್ನು ಅಮೆರಿಕದ ಪಡೆಗಳು ಟಾರ್ಗೆಟ್ ಮಾಡಿ ಧ್ವಂಸ ಮಾಡಿರುವ ದೃಶ್ಯಗಳನ್ನು ಹಂಚಿಕೊಂಡಿವೆ. ಈ ನೌಕೆಯಲ್ಲಿ ದೊಡ್ಡ ಪ್ರಮಾಣದ ಡ್ರೋನ್ಗಳನ್ನು ಸಂಗ್ರಹಿಸಲಾಗಿತ್ತು ಎಂದು ಹೇಳಲಾಗುತ್ತಿದೆ. ದಾಳಿಯ ವೇಳೆ ನೌಕೆ ಸಂಪೂರ್ಣವಾಗಿ ಹಾನಿಗೊಂಡಿದ್ದು ಸಮುದ್ರದಲ್ಲಿ ಮುಳುಗಿದೆ .
ಈ ಕಾರ್ಯಾಚರಣೆಯ ವಿಡಿಯೋವನ್ನು ಅಮೆರಿಕದ ಸೆಂಟ್ರಲ್ ಕಮಾಂಡ್ ತಮ್ಮ ಅಧಿಕೃತ “X” ಖಾತೆಯಲ್ಲಿ ಪೋಸ್ಟ್ ಮಾಡಿದೆ. ದಾಳಿ ನಿಖರವಾಗಿ ನಡೆದಿದ್ದು ಇರಾನ್ನ ನೌಕಾಪಡೆಯ ಸಾಮರ್ಥ್ಯಕ್ಕೆ ದೊಡ್ಡ ಹೊಡೆತ ಬಿದ್ದಿದೆ ಎಂದು ಅಮೆರಿಕ ಹೇಳಿದೆ.
ಇದರ ಮಧ್ಯೆ ಮತ್ತೊಂದು ಆತಂಕಕಾರಿ ಬೆಳವಣಿಗೆ ಟೆಹ್ರಾನ್ ನಗರದಲ್ಲಿ ನಡೆದಿದೆ. ಇರಾನ್ನ ರಾಜಧಾನಿ ಟೆಹ್ರಾನ್ ಅನ್ನು ಗುರಿಯಾಗಿಸಿಕೊಂಡು ಕ್ಷಿಪಣಿಗಳ ದಾಳಿ ನಡೆದಿದೆ.. ನಗರದ ಹಲವೆಡೆ ಒಂದೇ ಸಮಯದಲ್ಲಿ ಸ್ಫೋಟಗಳ ಶಬ್ದ ಕೇಳಿಬಂದಿದೆ ಅಂತೆ .
ಇಸ್ರೇಲ್ ಕೂಡ ಇರಾನ್ ವಿರುದ್ಧದ ದಾಳಿಯನ್ನು ತೀವ್ರಗೊಳಿಸಿದೆ . ನಾಗರಿಕ ಪ್ರದೇಶಗಳನ್ನೇ ಗುರಿಯಾಗಿಸಿಕೊಂಡು ದಾಳಿ ನಡೆಸಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ. ಇದಕ್ಕೆ ಜೊತೆಗೆ ಇರಾನ್ನ ಶಸ್ತ್ರಾಸ್ತ್ರ ಸಂಗ್ರಹಣೆ ಕೇಂದ್ರಗಳ ಮೇಲೂ ಅಮೆರಿಕ ಭಾರೀ ದಾಳಿ ನಡೆಸಿದೆ ಎಂದು ಮಾಹಿತಿ ಲಭ್ಯವಾಗಿದೆ. ಈ ದಾಳಿಗಳ ಪರಿಣಾಮ ಮಧ್ಯಪ್ರಾಚ್ಯದಲ್ಲಿ ಯುದ್ಧದ ಆತಂಕ ಮತ್ತಷ್ಟು ಹೆಚ್ಚಾಗಿದೆ.
ಒಟ್ಟಾರೆ ಇರಾನ್, ಅಮೆರಿಕ ಮತ್ತು ಇಸ್ರೇಲ್ ನಡುವಿನ ಉದ್ವಿಗ್ನತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮುಂದಿನ ದಿನಗಳಲ್ಲಿ ಪರಿಸ್ಥಿತಿ ಯಾವ ದಿಕ್ಕಿಗೆ ತಿರುಗುತ್ತದೆ ಎಂಬುದು ಜಾಗತಿಕ ಮಟ್ಟದಲ್ಲಿ ಕುತೂಹಲ ಮತ್ತು ಆತಂಕಕ್ಕೆ ಕಾರಣವಾಗಿದೆ.
