Ashwaveega News 24×7 ಮಾರ್ಚ್ 08 – 2026 : ಭಾರತದ ಕ್ರಿಕೆಟ್ ತಂಡದ ಗೆಲುವಿಗಾಗಿ ದೇಶಾದ್ಯಂತ ಅಭಿಮಾನಿಗಳು ಭಾರೀ ಉತ್ಸಾಹ ವ್ಯಕ್ತಪಡಿಸುತ್ತಿದ್ದಾರೆ. ಕೈಯಲ್ಲಿ ತ್ರಿವರ್ಣ ಧ್ವಜ ಹಿಡಿದು ತಂಡಕ್ಕೆ ಶುಭ ಹಾರೈಸುತ್ತಿರುವ ದೃಶ್ಯಗಳು ಎಲ್ಲೆಡೆ ಕಾಣಿಸುತ್ತಿವೆ.
ಕರ್ನಾಟಕದಲ್ಲಿಯೂ ಕ್ರಿಕೆಟ್ ಜ್ವರ ಜೋರಾಗಿದೆ. ಬೆಳಗಾವಿ ಮತ್ತು ಮೈಸೂರು ಸೇರಿದಂತೆ ರಾಜ್ಯದ ಹಲವು ನಗರಗಳಲ್ಲಿ ಅಭಿಮಾನಿಗಳು “ಇಂಡಿಯಾ… ಇಂಡಿಯಾ…” ಎಂದು ಘೋಷಣೆ ಕೂಗಿ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ.
ಸಿಲಿಕಾನ್ ಸಿಟಿ ಬೆಂಗಳೂರಲ್ಲೂ ವಿಶ್ವಕಪ್ ಕ್ರಿಕೆಟ್ ಮೇನಿಯಾ ತಾರಕಕ್ಕೇರಿದೆ. ಕೆಲವೆಡೆ ಅಭಿಮಾನಿಗಳು 101 ಇಡುಗಾಯಿ ಒಡೆದು ಭಾರತದ ಗೆಲುವಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಫೈನಲ್ ಪಂದ್ಯ ವೀಕ್ಷಿಸಲು ಅಪಾರ್ಟ್ಮೆಂಟ್ಗಳು, ಮೈದಾನಗಳು ಹಾಗೂ ಕ್ಲಬ್ಗಳಲ್ಲಿ ಎಲ್ಇಡಿ ಸ್ಕ್ರೀನ್ಗಳನ್ನು ಅಳವಡಿಸಲಾಗಿದ್ದು, ಹೈವೋಲ್ಟೇಜ್ ಪಂದ್ಯವನ್ನು ಕಣ್ತುಂಬಿಕೊಳ್ಳಲು ಕ್ರಿಕೆಟ್ ಪ್ರೇಮಿಗಳು ಕಾತರದಿಂದ ಕಾಯುತ್ತಿದ್ದಾರೆ.
ಇದೇ ವೇಳೆ ಫೈನಲ್ ಪಂದ್ಯ ವೀಕ್ಷಿಸಲು ಅಹಮದಾಬಾದ್ಗೆ ಹಲವು ಗಣ್ಯರು ಆಗಮಿಸುತ್ತಿದ್ದು, ಭಾರತದ ಮಾಜಿ ನಾಯಕ ಎಂ.ಎಸ್. ಧೋನಿ ಸೇರಿದಂತೆ ಹಲವರು ಉಪಸ್ಥಿತರಿರುವ ನಿರೀಕ್ಷೆ ಇದೆ.
