Ashwaveega News 24×7 ಮಾರ್ಚ್ 10 – 2026 : ಕರ್ನಾಟಕ ರಾಜಕೀಯದಲ್ಲಿ ಸಿಎಂ ಸ್ಥಾನ ಕುರಿತ ಚರ್ಚೆಗಳು ಮುಂದುವರಿದಿರುವ ನಡುವೆಯೇ ಡಿಸಿಎಂ D. K. Shivakumar ಅವರ ದೆಹಲಿ ಪ್ರವಾಸ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಈ ಪ್ರವಾಸ ಸಕ್ಸಸ್ ಆಯಿತಾ ಅಥವಾ ಫೇಲ್ ಆಯಿತಾ ಎಂಬ ಪ್ರಶ್ನೆಗಳು ಕೇಳಿ ಬರುತ್ತಿರುವ ಸಂದರ್ಭದಲ್ಲೇ ಅವರು ಇನ್ನೂ ದೆಹಲಿಯಿಂದ ಮರಳಿಲ್ಲ ಎಂಬ ಮಾತುಗಳೂ ಹರಿದಾಡುತ್ತಿವೆ.
ಇದರ ನಡುವೆ ಡಿಸಿಎಂ ಡಿಕೆ ಶಿವಕುಮಾರ್ ಮಹತ್ವದ ಡಿನ್ನರ್ ಪಾರ್ಟಿಯನ್ನು ಆಯೋಜಿಸಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರಾಗಿ ಆರು ವರ್ಷ ಪೂರೈಸಿದ ಹಿನ್ನೆಲೆ ಸಂಭ್ರಮವಾಗಿ ಈ ಔತಣಕೂಟವನ್ನು ಆಯೋಜಿಸಲಾಗುತ್ತಿದೆ.
ಈ ಡಿನ್ನರ್ ಪಾರ್ಟಿಗೆ ಸಿಎಂ Siddaramaiah ಸೇರಿದಂತೆ ಸಚಿವರು, ಶಾಸಕರು ಹಾಗೂ ಪಕ್ಷದ ಹಿರಿಯ ನಾಯಕರಿಗೆ ಆಹ್ವಾನ ನೀಡಲಾಗಿದೆ. ನಗರದ ಖಾಸಗಿ ಹೋಟೆಲ್ನಲ್ಲಿ ಇಂದು ರಾತ್ರಿ ಈ ಔತಣಕೂಟ ನಡೆಯಲಿದೆ. ಆದರೆ ಈ ಡಿನ್ನರ್ ಪಾರ್ಟಿಯ ಹಿಂದೆ ರಾಜಕೀಯ ಲೆಕ್ಕಾಚಾರಗಳಿವೆಯೇ ಎಂಬ ಪ್ರಶ್ನೆಯೂ ಎದ್ದಿದೆ. ಅಧಿಕಾರ ಹಂಚಿಕೆ ಹಾಗೂ ನಾಯಕತ್ವ ವಿಚಾರಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ರಾಜಕೀಯ ವಲಯದಲ್ಲಿ ಮಾತು ಕೇಳಿ ಬರುತ್ತಿದೆ .
ಈಗಾಗಲೇ ಪಕ್ಷದಲ್ಲಿ ಹೊಸಬರಿಗೆ ಅವಕಾಶ ಕೊಡಬೇಕು ಎಂಬ ಹೇಳಿಕೆಯನ್ನು ಡಿಕೆ ಶಿವಕುಮಾರ್ ನೀಡಿರುವುದು ಕೂಡ ಗಮನ ಸೆಳೆದಿದೆ . ಪವರ್ ಫೈಟ್ ನಡುವೆಯೇ ಎಲ್ಲ ನಾಯಕರನ್ನೂ ಒಂದೇ ವೇದಿಕೆಗೆ ತರಲು ಡಿಸಿಎಂ ಮತ್ತೊಮ್ಮೆ ಪ್ರಯತ್ನಿಸುತ್ತಿದ್ದಾರಾ ಎಂಬ ಚರ್ಚೆಯೂ ಜೋರಾಗಿದೆ.
ಒಟ್ಟಿನಲ್ಲಿ, ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷ ಪೂರೈಸಿದ ಸಂಭ್ರಮ ಎಂಬ ನೆಪದಲ್ಲಿ ನಡೆಯುತ್ತಿರುವ ಈ ಡಿನ್ನರ್ ಪಾರ್ಟಿ ರಾಜಕೀಯವಾಗಿ ಮತ್ತಷ್ಟು ಕುತೂಹಲ ಹುಟ್ಟಿಸಿದೆ.
