Ashwaveega News 24×7 ಮಾರ್ಚ್ 10 – 2026 : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಇದೀಗ Pakistan ಮೇಲೆ ಗಂಭೀರವಾಗಿ ತಟ್ಟಿದೆ . Iran ಮತ್ತು Israel ನಡುವಿನ ಯುದ್ಧದ ಪರಿಣಾಮವಾಗಿ ಪಾಕಿಸ್ತಾನದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಕೊರತೆ ತೀವ್ರವಾಗಿದೆ .
ದೇಶದ ಹಲವೆಡೆ ಪೆಟ್ರೋಲ್ ಬಂಕ್ಗಳಲ್ಲಿ ಇಂಧನ ಲಭ್ಯವಿಲ್ಲದ ಕಾರಣ ಕಾರು , ಬೈಕ್ ಸೇರಿದಂತೆ ಅನೇಕ ವಾಹನಗಳು ನಿಂತಲ್ಲೇ ನಿಂತಿವೆ. ಕೆಲ ಪ್ರದೇಶಗಳಲ್ಲಿ ಸರ್ಕಾರಿ ವಾಹನಗಳೂ ಸ್ತಬ್ಧವಾಗಿದ್ದು , ಎಮೆರ್ಜೆನ್ಸಿ ಸೇವೆಗಳಿಗೂ ಪೆಟ್ರೋಲ್ ಮತ್ತು ಡೀಸೆಲ್ ಸಿಗದ ಪರಿಸ್ಥಿತಿ ಎದುರಾಗಿದೆ .
ಇಂಧನ ಕೊರತೆಯನ್ನು ನಿಯಂತ್ರಿಸಲು ಪಾಕಿಸ್ತಾನ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. ಶಾಲೆಗಳನ್ನು ಎರಡು ವಾರಗಳ ಕಾಲ ಬಂದ್ ಮಾಡಲು ಹಾಗೂ ಸರ್ಕಾರಿ ಕಚೇರಿಗಳಿಗೆ ವಾರದಲ್ಲಿ ಕೇವಲ ನಾಲ್ಕು ದಿನ ಮಾತ್ರ ಕೆಲಸ ಮಾಡಲು ನಿರ್ಧಾರ ಮಾಡಲಾಗಿದೆ .
ಇದಲ್ಲದೆ ಪೆಟ್ರೋಲ್ ಮತ್ತು ಡೀಸೆಲ್ ಬಳಕೆಗೆ ನಿಯಂತ್ರಣ ಹೇರಲಾಗಿದ್ದು, ಜನರು ಅಗತ್ಯವಿದ್ದಾಗ ಮಾತ್ರ ಇಂಧನ ಬಳಕೆ ಮಾಡಬೇಕು ಎಂದು ಪಾಕಿಸ್ತಾನ ಪ್ರಧಾನಿ Shehbaz Sharif ಮನವಿ ಮಾಡಿದ್ದಾರೆ .
ಮಧ್ಯಪ್ರಾಚ್ಯದ ಯುದ್ಧದ ಪರಿಣಾಮದಿಂದ ಪಾಕಿಸ್ತಾನದಲ್ಲಿ ತೈಲ ಬಿಕ್ಕಟ್ಟು ತೀವ್ರಗೊಂಡಿದ್ದು, ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರು ಈಗಾಗಲೇ ಸಂಕಷ್ಟ ಅನುಭವಿಸುತ್ತಿದ್ದಾರೆ. ಸದ್ಯ ಇರುವ ಇಂಧನವನ್ನು ಉಳಿಸಿಕೊಳ್ಳಲು ಸರ್ಕಾರ ಇನ್ನೂ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿಬರುತ್ತಿವೆ .
