Ashwaveega News 24×7 ಮಾರ್ಚ್ 13– 2026 : ಕೋಲಾರ : ಅಕ್ರಮವಾಗಿ ಹಸುಗಳನ್ನು ಸಾಗಿಸುತ್ತಿದ್ದ ಕಂಟೇನರ್ ವಾಹನವನ್ನು ತಡೆದು 22 ಹಸುಗಳನ್ನು ರಕ್ಷಿಸಿದ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಬೈರಕೂರು ಗ್ರಾಮದ ಬಳಿ ನಡೆದಿದೆ.
ಆಂಧ್ರ ಪ್ರದೇಶದ ಪುಂಗನೂರಿನಿಂದ ಕಸಾಯಿಖಾನೆಗೆ ಸಾಗಿಸಲಾಗುತ್ತಿದ್ದ ಹಸುಗಳನ್ನು ಕಂಟೇನರ್ನಲ್ಲಿ ತುಂಬಿ ಅಕ್ರಮವಾಗಿ ಕೊಂಡೊಯ್ಯಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ಮಾಹಿತಿ ಪಡೆದ ಭಜರಂಗದಳ ಕಾರ್ಯಕರ್ತರು ವಾಹನವನ್ನು ತಡೆದು ಪರಿಶೀಲನೆ ನಡೆಸಿದರು.
ಈ ವೇಳೆ ಕಂಟೇನರ್ನಲ್ಲಿ ಒಟ್ಟು 22 ಹಸುಗಳು ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಕಾರ್ಯಕರ್ತರು ಹಸುಗಳನ್ನು ರಕ್ಷಿಸಿ ನಂಗಲಿ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
ವಾಹನವನ್ನು ತಡೆದ ಕೂಡಲೇ ಡ್ರೈವರ್ ನಯಾಜ್ ಶರೀಫ್ ಹಾಗೂ ಕ್ಲೀನರ್ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಈ ಘಟನೆ ಹಿನ್ನೆಲೆಯಲ್ಲಿ ಅಕ್ರಮ ಹಸು ಸಾಗಾಟಕ್ಕೆ ಬ್ರೇಕ್ ಇಲ್ಲವೇ ಎಂಬ ಪ್ರಶ್ನೆ ಮತ್ತೆ ಕೇಳಿಬರುತ್ತಿದ್ದು, ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
