Ashwaveega News 24×7 ಮಾರ್ಚ್ 13– 2026 : ವೈರಲ್ ಆಗಿರುವ ಆಡಿಯೋ ಕ್ಲಿಪ್ ಹಿನ್ನೆಲೆ ನಟಿ ರಶ್ಮಿಕಾ ಮಂದಣ್ಣ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ . ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಆಡಿಯೋ ಮತ್ತು ಅದಕ್ಕೆ ಸಂಬಂಧಿಸಿದ ಸುದ್ದಿಗಳ ವಿರುದ್ಧ ಅವರು ಕಿಡಿಕಾರಿದ್ದಾರೆ.
ಇತ್ತೀಚೆಗಷ್ಟೇ ತೆಲುಗು ನಟ ವಿಜಯ್ ಅವರೊಂದಿಗೆ ವಿವಾಹವಾಗಿದ್ದಾರೆ ಎಂಬ ಸುದ್ದಿಗಳ ನಡುವೆ ಇದೀಗ ಹೊಸ ವಿವಾದ ಸೃಷ್ಟಿಯಾಗಿದೆ. ಮದುವೆಯ ಖುಷಿಯನ್ನು ಅನುಭವಿಸಲು ಬಿಡದೆ ಹಳೆಯ ವಿಷಯಗಳನ್ನು ಕೆದಕಿ ಕೆಲವು ಆಡಿಯೋ ಕ್ಲಿಪ್ಗಳನ್ನು ವೈರಲ್ ಮಾಡಲಾಗುತ್ತಿದೆ ಎಂದು ರಶ್ಮಿಕಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸುಮನ್ ಮಂದಣ್ಣ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಅದನ್ನು ಆಧರಿಸಿ ಕೆಲವು ಕಡೆ ನೆಗೆಟಿವ್ ಪ್ರಚಾರ ನಡೆಯುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ.
ಈ ಬೆಳವಣಿಗೆಯಿಂದ ಸಿಡಿದೆದ್ದಿರುವ ‘ನ್ಯಾಷನಲ್ ಕ್ರಶ್’ ರಶ್ಮಿಕಾ ಮಂದಣ್ಣ ತಮ್ಮ ಇನ್ಸ್ಟಾಗ್ರಾಂ ಪೋಸ್ಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ತಪ್ಪು ಮಾಹಿತಿ ಹರಡಬೇಡಿ ಎಂದು ಎಚ್ಚರಿಕೆ ನೀಡಿರುವ ಅವರು, ಆಡಿಯೋಗೆ ಸಂಬಂಧಿಸಿದ ಸುದ್ದಿಗಳನ್ನು ತಕ್ಷಣ ಡಿಲೀಟ್ ಮಾಡಬೇಕು ಎಂದು ಹೇಳಿದ್ದಾರೆ.
ಸುದ್ದಿ ಮತ್ತು ಪೋಸ್ಟ್ಗಳನ್ನು ತೆಗೆದುಹಾಕದಿದ್ದರೆ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಕೂಡ ರಶ್ಮಿಕಾ ಎಚ್ಚರಿಕೆ ನೀಡಿದ್ದಾರೆ. ಈ ವಿಚಾರ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.
