Ashwaveega News 24×7 ಮಾರ್ಚ್ 13 – 2026 : ಜಾಗತಿಕ ತೈಲ ಮತ್ತು ಅನಿಲ ಬಿಕ್ಕಟ್ಟಿನ ಪರಿಣಾಮ ಇದೀಗ ಸಿಲಿಕಾನ್ ಸಿಟಿ ಬೆಂಗಳೂರಿಗೂ ತಟ್ಟುವ ಸಾಧ್ಯತೆ ವ್ಯಕ್ತವಾಗಿದೆ . ಅನಿಲ ಕೊರತೆಯಿಂದ ವಿದ್ಯುತ್ ಉತ್ಪಾದನೆ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದ್ದು, ನಗರದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಆತಂಕ ಎದುರಾಗಿದೆ .
ನಗರದ ವಿದ್ಯುತ್ ಅಗತ್ಯತೆ ಪೂರೈಸುವ ಉದ್ದೇಶದಿಂದ Yelahanka Gas Based Power Plant ನಲ್ಲಿ ಸ್ಥಾಪಿಸಲಾದ ಅನಿಲ ಆಧಾರಿತ ವಿದ್ಯುತ್ ಉತ್ಪಾದನಾ ಘಟಕಕ್ಕೆ ಅನಿಲ ಪೂರೈಕೆ ಸ್ಥಗಿತಗೊಂಡಿರುವುದು ಪರಿಸ್ಥಿತಿಯನ್ನು ಗಂಭೀರಗೊಳಿಸಿದೆ .
ಈ ಘಟಕಕ್ಕೆ ಅನಿಲ ಪೂರೈಕೆ ಮಾಡುತ್ತಿದ್ದ GAIL ಸಂಸ್ಥೆ ನಿನ್ನೆದಿಂದ ಅನಿಲ ಪೂರೈಕೆಯನ್ನು ಸಂಪೂರ್ಣವಾಗಿ ನಿಲ್ಲಿಸಿರುವುದಾಗಿ ಮೂಲಗಳು ತಿಳಿಸಿವೆ. ಗ್ಯಾಸ್ ಬಿಕ್ಕಟ್ಟು ಆರಂಭವಾದ ವೇಳೆಯೇ ಈ ವಿದ್ಯುತ್ ಘಟಕಕ್ಕೆ ಶೇಕಡಾ 20ರಷ್ಟು ಅನಿಲ ಪೂರೈಕೆಯನ್ನು ಕಡಿತಗೊಳಿಸಲಾಗಿತ್ತು. ಆದರೆ ಇದೀಗ ಅನಿಲ ಪೂರೈಕೆ ಸಂಪೂರ್ಣವಾಗಿ ಸ್ಥಗಿತಗೊಂಡಿರುವುದರಿಂದ ವಿದ್ಯುತ್ ಉತ್ಪಾದನೆ ಮೇಲೆ ನೇರ ಪರಿಣಾಮ ಬೀರುವ ಸಾಧ್ಯತೆ ಇದೆ .
ಯಲಹಂಕದಲ್ಲಿರುವ ಈ ಅನಿಲ ಆಧಾರಿತ ವಿದ್ಯುತ್ ಘಟಕವನ್ನು ಮುಖ್ಯವಾಗಿ ಬೆಂಗಳೂರಿನ ವಿದ್ಯುತ್ ಪೂರೈಕೆ ಬಲಪಡಿಸುವ ಉದ್ದೇಶದಿಂದ ಸ್ಥಾಪಿಸಲಾಗಿತ್ತು. ಅನಿಲ ಪೂರೈಕೆ ಇಲ್ಲದಿರುವುದರಿಂದ ಘಟಕದ ಕಾರ್ಯಾಚರಣೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ .
ಜಾಗತಿಕ ತೈಲ ಮತ್ತು ಅನಿಲ ಪೂರೈಕೆ ವ್ಯವಸ್ಥೆಯಲ್ಲಿ ಉಂಟಾಗಿರುವ ಅಸ್ಥಿರತೆ ಹಾಗೂ ಮಧ್ಯಪ್ರಾಚ್ಯ ಪ್ರದೇಶದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಈ ಸಮಸ್ಯೆಗೆ ಪ್ರಮುಖ ಕಾರಣಗಳಾಗಿವೆ. ಪರಿಸ್ಥಿತಿ ಮುಂದುವರಿದರೆ ಬೆಂಗಳೂರಿನ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ .
ಅನಿಲ ಕೊರತೆಯಿಂದ ಯಲಹಂಕದಲ್ಲಿರುವ ಅನಿಲ ಆಧಾರಿತ ವಿದ್ಯುತ್ ಉತ್ಪಾದನಾ ಘಟಕಕ್ಕೆ ಗ್ಯಾಸ್ ಪೂರೈಕೆ ಸ್ಥಗಿತಗೊಂಡಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಎದುರಾಗಿದೆ .
