Ashwaveega News 24×7 ಮಾರ್ಚ್ 14– 2026 : ಎಲ್ಪಿಜಿ ಸಿಲಿಂಡರ್ಗಳಿಗೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಾಳಸಂತೆ ತಡೆಗಟ್ಟಲು ಪೊಲೀಸರು ಕಣ್ಣಿಟ್ಟಿದ್ದಾರೆ. ಈ ಹಿನ್ನೆಲೆ ಗ್ಯಾಸ್ ಗೋಡೌನ್ಗಳ ಮೇಲೆ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ .
ಹೊಸಕೋಟೆ ತಾಲ್ಲೂಕಿನ ಅನುಗೊಂಡನಹಳ್ಳಿಯಲ್ಲಿರುವ ಗ್ಯಾಸ್ ಗೋಡೌನ್ ಮೇಲೆ ಪೊಲೀಸರು ದಾಳಿ ನಡೆಸಿದರು. ಅನುಗೊಂಡನಹಳ್ಳಿ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ತೆರಳಿ ಸಿಲಿಂಡರ್ಗಳ ದಾಸ್ತಾನು ಮತ್ತು ದಾಖಲೆಗಳನ್ನು ಪರಿಶೀಲಿಸಿದರು .
ಕೆಲವು ಏಜೆಂಟ್ಗಳು ಹೆಚ್ಚಿನ ಪ್ರಮಾಣದಲ್ಲಿ ಸಿಲಿಂಡರ್ಗಳನ್ನು ಸಂಗ್ರಹಿಸಿಟ್ಟಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಪೊಲೀಸರು ಗೋಡೌನ್ನಲ್ಲಿ ಸಂಗ್ರಹಿಸಿದ್ದ ಸಿಲಿಂಡರ್ಗಳ ಮಾಹಿತಿ ಸಂಗ್ರಹಿಸಿ ಪರಿಶೀಲನೆ ನಡೆಸಿದರು .
ಈ ವೇಳೆ ಅಕ್ರಮವಾಗಿ ಸಿಲಿಂಡರ್ ಸಂಗ್ರಹಿಸಬಾರದು ಹಾಗೂ ಬ್ಲಾಕ್ನಲ್ಲಿ ಮಾರಾಟ ಮಾಡಬಾರದು ಎಂದು ಏಜೆಂಟ್ಗಳಿಗೆ ಖಡಕ್ ಎಚ್ಚರಿಕೆ ನೀಡಲಾಗಿದೆ. ನಿಯಮ ಉಲ್ಲಂಘನೆ ಕಂಡುಬಂದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ .
