Ashwaveega News 24×7 ಮಾರ್ಚ್ 14– 2026 : ಕುಂಭಮೇಳದ ವೇಳೆ ಜನರ ಗಮನ ಸೆಳೆದಿದ್ದ ಮೊನಾಲಿಸಾ ಮದುವೆ ಇದೀಗ ವಿವಾದಕ್ಕೆ ಕಾರಣವಾಗಿದೆ. ಕೇರಳದಲ್ಲಿ ಮುಸ್ಲಿಂ ಯುವಕ ಫರ್ಮಾನ್ ಜೊತೆ ಮೊನಾಲಿಸಾ ವಿವಾಹವಾಗಿರುವ ಘಟನೆಗೆ ಸಂಬಂಧಿಸಿ, ಆಕೆಯ ತಂದೆ ಜಯಸಿಂಗ್ ಗಂಭೀರ ಆರೋಪ ಮಾಡಿದ್ದಾರೆ.
ತಮ್ಮ ಮಗಳು “ಲವ್ ಜಿಹಾದ್”ಗೆ ಬಲಿಯಾಗಿದ್ದಾಳೆ ಎಂದು ಆರೋಪಿಸಿರುವ ಜಯಸಿಂಗ್, ಮಧ್ಯಪ್ರದೇಶ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ನನ್ನ ಮಗಳನ್ನು ನಮ್ಮ ರಾಜ್ಯಕ್ಕೆ ವಾಪಸ್ ಕರೆಸಬೇಕು ಎಂದು ಅವರು ಕೇಳಿಕೊಂಡಿದ್ದಾರೆ.
ಮೊನಾಲಿಸಾ ಮತ್ತು ಫರ್ಮಾನ್ ಅವರ ವಿವಾಹ ಕೆಲವು ಸಚಿವರ ಸಮ್ಮುಖದಲ್ಲಿ ನಡೆದಿದ್ದು, ಇದಕ್ಕೆ ಆರಂಭದಿಂದಲೇ ಜಯಸಿಂಗ್ ವಿರೋಧ ವ್ಯಕ್ತಪಡಿಸಿದ್ದರು. ಮಗಳ ಈ ನಿರ್ಧಾರಕ್ಕೆ ಕುಟುಂಬದ ಒಪ್ಪಿಗೆ ಇಲ್ಲ ಎಂದು ಅವರು ಹೇಳಿದ್ದಾರೆ.
ಇದೀಗ ಈ ವಿಷಯ ರಾಜಕೀಯ ಹಾಗೂ ಸಾಮಾಜಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಆದರೆ ಈ ಆರೋಪಗಳ ಬಗ್ಗೆ ಸಂಬಂಧಪಟ್ಟವರಿಂದ ಅಧಿಕೃತ ಪ್ರತಿಕ್ರಿಯೆ ಇನ್ನೂ ಸ್ಪಷ್ಟವಾಗಿ ಹೊರಬಂದಿಲ್ಲ.
ಈ ನಡುವೆ, ಪ್ರಕರಣದ ಬಗ್ಗೆ ಸತ್ಯಾಸತ್ಯತೆ ತಿಳಿಯಲು ಸಂಬಂಧಿಸಿದ ಅಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ .
