Ashwaveega News 24×7 ಮಾರ್ಚ್ 14– 2026 : ರಾಜ್ಯದಲ್ಲಿ ಗ್ಯಾಸ್ ಕೊರತೆ ಸಮಸ್ಯೆ ಎದುರಾಗಿರುವ ನಡುವೆಯೇ ಗ್ಯಾಸ್ ಟ್ಯಾಂಕರ್ ಲಾರಿ ಪಲ್ಟಿಯಾದ ಘಟನೆ ಆತಂಕ ಹುಟ್ಟಿಸಿದೆ. ನೆಲಮಂಗಲ ತಾಲೂಕಿನ ಸೋಲೂರು ಸಮೀಪ ಈ ಅವಘಡ ಸಂಭವಿಸಿದೆ.
ಮಂಗಳೂರಿನಿಂದ ಚೆನ್ನೈ ಕಡೆಗೆ ಹೊರಟಿದ್ದ ಗ್ಯಾಸ್ ಟ್ಯಾಂಕರ್, ಚೆನ್ನೈನ HP ಗ್ಯಾಸ್ ಪ್ಲ್ಯಾಂಟ್ಗೆ ತೆರಳುತ್ತಿದ್ದಾಗ ಹೆದ್ದಾರಿಯಲ್ಲಿ ಪಲ್ಟಿಯಾಗಿದೆ. ಅತಿವೇಗದ ಚಾಲನೆಯೇ ಅವಘಡಕ್ಕೆ ಕಾರಣ ಎನ್ನಲಾಗಿದೆ.
ಲಾರಿ ಪಲ್ಟಿಯಾದ ದೃಶ್ಯ ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ ಆಗಿದೆ. ಅವಘಡದ ಬಳಿಕ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ವಾಹನ ಸವಾರರಲ್ಲಿ ಗ್ಯಾಸ್ ಲೀಕೇಜ್ ಆಗಬಹುದೆಂಬ ಭೀತಿ ಉಂಟಾಯಿತು.
ಸುದ್ದಿ ತಿಳಿದ ತಕ್ಷಣ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಭದ್ರತಾ ಕ್ರಮ ಕೈಗೊಂಡರು. ಯಾವುದೇ ಗ್ಯಾಸ್ ಲೀಕೇಜ್ ಆಗದಂತೆ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಅವಘಡ ಸಂಭವಿಸಿದ ಸ್ಥಳದಿಂದ ಗ್ಯಾಸ್ ಟ್ಯಾಂಕರ್ ಅನ್ನು ಸುರಕ್ಷಿತವಾಗಿ ಸ್ಥಳಾಂತರಿಸುವ ಕಾರ್ಯಾಚರಣೆ ಮುಂದುವರಿದಿದ್ದು, ಸ್ಥಳದಲ್ಲಿ ಅಗ್ನಿಶಾಮಕ ಸಿಬ್ಬಂದಿ ಬೀಡುಬಿಟ್ಟಿದ್ದಾರೆ.
