Ashwaveega News 24×7 ಮಾರ್ಚ್ 19 – 2026 : ಹಾಸನ : ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಸಹೋದರಿ ಜವರಮ್ಮ (88) ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ.
ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಜವರಮ್ಮ ಅವರಿಗೆ ಚಿಕಿತ್ಸೆ ಫಲಕಾರಿಯಾಗದೆ ಇಂದು (ಮಾ.19) ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.
ತಂಗಿಯ ನಿಧನದ ಸುದ್ದಿಯಿಂದ ದೇವೇಗೌಡರು ದುಃಖಭರಿತರಾಗಿ ಕಂಬನಿ ಮಿಡಿದಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಜವರಮ್ಮ ಅವರ ಅಂತ್ಯಕ್ರಿಯೆ ಇಂದು ಸಂಜೆ ಹೊಳೆನರಸೀಪುರ ತಾಲೂಕಿನ ಬಸವ ನಾಯಕನ ಹಳ್ಳಿಯಲ್ಲಿ ನಡೆಯಲಿದೆ .
ಕುಟುಂಬಸ್ಥರು, ಬಂಧು-ಬಳಗದವರು ಹಾಗೂ ಅಭಿಮಾನಿಗಳು ಅಂತಿಮ ದರ್ಶನ ಪಡೆಯಲಿದ್ದಾರೆ. ಅವರ ನಿಧನದಿಂದ ಕುಟುಂಬ ಹಾಗೂ ಪ್ರದೇಶದಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ .
