Ashwaveega News 24×7 ಮಾರ್ಚ್ 20 – 2026 : ಬೆಂಗಳೂರು : ರಾಜ್ಯದ ಬೈ ಎಲೆಕ್ಷನ್ ರಾಜಕೀಯ ಚಟುವಟಿಕೆಗಳು ತೀವ್ರಗೊಳ್ಳುತ್ತಿದ್ದಂತೆ ಬಿಜೆಪಿ ಈಗಾಗಲೇ ತನ್ನ ಅಭ್ಯರ್ಥಿಗಳನ್ನು ಘೋಷಿಸಿ ಮುನ್ನಡೆ ಸಾಧಿಸಿದೆ . ಇತ್ತ ಕಾಂಗ್ರೆಸ್ನಲ್ಲಿ ಟಿಕೆಟ್ ಹಂಚಿಕೆ ಕುರಿತ ಗೊಂದಲ ಮುಂದುವರಿದಿದೆ .
ಈ ಗೊಂದಲಕ್ಕೆ ತೆರೆ ಎಳೆಯಲು ಕಾಂಗ್ರೆಸ್ ಹಿರಿಯ ನಾಯಕ ರಣದೀಪ್ ಸಿಂಗ್ ಸುರ್ಜೇವಾಲ ಇಂದು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಎರಡೂ ಕ್ಷೇತ್ರಗಳ ಟಿಕೆಟ್ ವಿಚಾರವನ್ನು ಇಂದೇ ಅಂತಿಮಗೊಳಿಸುವ ಸಾಧ್ಯತೆ ಇದೆ .
ಇಂದು ಮಧ್ಯಾಹ್ನ ಕೆಪಿಸಿಸಿ ಕಚೇರಿಯಲ್ಲಿ ಹೈವೋಲ್ಟೇಜ್ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಸಿಎಂ ಹಾಗೂ ಡಿಸಿಎಂ ಜೊತೆ ಮಹತ್ವದ ಚರ್ಚೆ ನಡೆಯಲಿದೆ. ಕ್ಷೇತ್ರಗಳ ಟಿಕೆಟ್ ಹಂಚಿಕೆ ಕುರಿತಂತೆ ಪ್ರಮುಖ ತೀರ್ಮಾನಗಳು ಕೈಗೊಳ್ಳುವ ನಿರೀಕ್ಷೆ ಇದೆ.
ಸಭೆಯಲ್ಲಿ ಸಂಬಂಧಿತ ಕ್ಷೇತ್ರಗಳ ಮುಖಂಡರು, ಸಚಿವರು ಮತ್ತು ಶಾಸಕರು ಭಾಗವಹಿಸಲಿದ್ದಾರೆ. ಬೈಎಲೆಕ್ಷನ್ ಗೆಲ್ಲಲು ಬೇಕಾದ ರಣತಂತ್ರಗಳ ಕುರಿತು ಸವಿಸ್ತಾರ ಚರ್ಚೆ ನಡೆಯಲಿದೆ.
ಸಭೆಯಲ್ಲಿ ಎಲ್ಲರಿಂದ ಅಭಿಪ್ರಾಯ ಸಂಗ್ರಹಿಸಿ, ಅಂತಿಮ ವರದಿಯನ್ನು ಹೈಕಮಾಂಡ್ ಮುಂದೆ ಇಡುವ ಜವಾಬ್ದಾರಿ ಸುರ್ಜೇವಾಲ ಅವರದ್ದಾಗಿದೆ.
ಒಟ್ಟಿನಲ್ಲಿ, ಕಾಂಗ್ರೆಸ್ನಲ್ಲಿ ಟಿಕೆಟ್ ಗೊಂದಲ ಇಂದೇ ನಿವಾರಣೆಯಾಗುವ ಸಾಧ್ಯತೆ ಇದ್ದು, ಬೈಎಲೆಕ್ಷನ್ ರಾಜಕೀಯ ಇನ್ನಷ್ಟು ಕಾವೇರಲಿದೆ.
