Ashwaveega News 24×7 ಮಾರ್ಚ್ 22 – 2026 : ದೇವನಹಳ್ಳಿ: ಬೆಂಗಳೂರು ಹೊರವಲಯದ ದೇವನಹಳ್ಳಿ ಸಮೀಪದ ರಾಣಿ ಕ್ರಾಸ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮಹಿಳೆಯರು ಮೃತಪಟ್ಟಿದ್ದಾರೆ.
ಜಯಮ್ಮ (60), ಯಶೋದಮ್ಮ (60) ಹಾಗೂ ಗಂಗಾ (38) ಮೃತರಾದವರು ಎಂದು ಗುರುತಿಸಲಾಗಿದೆ. ಲಾರಿ ಡಿಕ್ಕಿ ಹೊಡೆದ ಪರಿಣಾಮ ಟಿಟಿ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ.
ಹೈವೇಯಿಂದ ಸರ್ವಿಸ್ ರಸ್ತೆಗೆ ಬರುತ್ತಿದ್ದ ಟಿಟಿಗೆ ಲಾರಿ ಡಿಕ್ಕಿ ಹೊಡೆದಿದ್ದು, ಟಿಟಿ ಚಾಲಕ ಸೇರಿದಂತೆ ಒಟ್ಟು 8 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ದೇವನಹಳ್ಳಿಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತದ ಹಿನ್ನೆಲೆ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ಸ್ಥಳಕ್ಕೆ ದೇವನಹಳ್ಳಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಆಂಬುಲೆನ್ಸ್ ಮೂಲಕ ಶವಾಗಾರಕ್ಕೆ ರವಾನೆ ಮಾಡಲಾಗಿದೆ .
