Ashwaveega News 24×7 ಮಾರ್ಚ್ 22 – 2026 : ಬೆಂಗಳೂರು: ದಾವಣಗೆರೆ ಸೇರಿದಂತೆ ವಿವಿಧ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದ ಟಿಕೆಟ್ ಹಂಚಿಕೆ ಸುಲಭದ ತೀರ್ಮಾನವಾಗಿರಲಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ಕುಟುಂಬದವರೇ ಟಿಕೆಟ್ ಕೇಳಿದ್ದರೆ, ಇನ್ನೊಂದೆಡೆ ಕಾರ್ಯಕರ್ತರು ಬೇರೆಯವರಿಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದ್ದರು ಎಂದು ಹೇಳಿದರು.
ಈ ಎಲ್ಲಾ ಒತ್ತಡಗಳ ನಡುವೆಯೂ, ಹೈಕಮಾಂಡ್ ಬಹಳ ಎಚ್ಚರಿಕೆಯಿಂದ ಪರಿಶೀಲನೆ ನಡೆಸಿ, ಸಮರ್ಥ್ ಹಾಗೂ ಉಮೇಶ್ ಮೇಟಿ ಅವರಿಗೆ ಟಿಕೆಟ್ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.
ಹೈಕಮಾಂಡ್ ತೀರ್ಮಾನವನ್ನು ಎಲ್ಲರೂ ಗೌರವಿಸಿ, ಒಗ್ಗಟ್ಟಿನಿಂದ ಕೆಲಸ ಮಾಡಬೇಕಾಗಿದೆ. ಪಕ್ಷದ ಎಲ್ಲಾ ನಾಯಕರು ಮತ್ತು ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಂದಿನ ಚುನಾವಣೆಯನ್ನು ಎದುರಿಸುತ್ತೇವೆ ಎಂದು ಹೇಳಿದರು.
ಮುಖ್ಯಮಂತ್ರಿ ಹಾಗೂ ಡಿ.ಕೆ. ಶಿವಕುಮಾರ್ ಅವರ ಸೂಚನೆಯಂತೆ ಕಾರ್ಯತಂತ್ರ ರೂಪಿಸಿ, ಅಭ್ಯರ್ಥಿಗಳನ್ನು ಗೆಲ್ಲಿಸುವತ್ತ ಗಮನ ಹರಿಸಲಾಗುವುದು ಎಂದು ಗೃಹ ಸಚಿವರು ಹೇಳಿದರು.
