Ashwaveega News 24×7 ಮಾರ್ಚ್ 25 – 2026 : ಬೆಂಗಳೂರು : ಬೆಂಗಳೂರು ನಗರದಲ್ಲಿ ಸಂಚಲನ ಮೂಡಿಸಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಪಾಪಣ್ಣ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ.
ಲೇಡಿ ರೌಡಿಶೀಟರ್ ಯಶಸ್ವಿನಿ ಮೇಲೆ ಪ್ರೀತಿ ತೋರಿದಂತೆ ನಡೆದುಕೊಂಡಿದ್ದ ಇನ್ಸ್ಪೆಕ್ಟರ್, “ಚಿನ್ನ, ಮುದ್ದು, ಬಂಗಾರಿ, ಕಿಸ್ ಮಿ, ಹಗ್ ಮಿ” ಎಂಬ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ. ಈ ಸಂದೇಶಗಳನ್ನು ವಿರೋಧಿಸಿದ ನಂತರ, ಅವಳಿಗೆ ಬೆದರಿಕೆ ಹಾಕಲಾಗಿದೆ ಎಂಬುದೂ ತಿಳಿದುಬಂದಿದೆ.
ಇನ್ಸ್ಪೆಕ್ಟರ್ ಪಾಪಣ್ಣ ಅವರು ಕೇವಲ ಅಶ್ಲೀಲ ಸಂದೇಶಗಳಲ್ಲದೆ , ಮಾನಸಿಕ ಕಿರುಕುಳ ಹಾಗೂ ಲೈಂಗಿಕ ದೌರ್ಜನ್ಯಕ್ಕೂ ಯತ್ನಿಸಿದ್ದಾರೆ . ಈ ಬಗ್ಗೆ ಮಹಿಳೆ ವಾಟ್ಸಾಪ್ ಚಾಟ್ಗಳು , ಆಡಿಯೋ ದಾಖಲೆಗಳಂತಹ ಸಾಕ್ಷ್ಯಗಳನ್ನು ಕೂಡ ಸಂಗ್ರಹಿಸಿ ಕಮಿಷನರ್ ಕಚೇರಿಗೆ ದೂರು ನೀಡಿದ್ದಾರೆ.
ಇನ್ನಷ್ಟು ಗಂಭೀರವಾಗಿ , ಈ ವಿಚಾರವನ್ನು ಬಹಿರಂಗಪಡಿಸಿದರೆ ಮಹಿಳೆ ಹಾಗೂ ಆಕೆಯ ಮಕ್ಕಳನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ಇದರಿಂದ ಪ್ರಕರಣ ಇನ್ನಷ್ಟು ಗಂಭೀರತೆಯನ್ನು ಪಡೆದುಕೊಂಡಿದೆ .
ಈ ಘಟನೆಗೆ ಸಂಬಂಧಿಸಿದ ಆಡಿಯೋ ಕ್ಲಿಪ್ಗಳು ಹಾಗೂ ಮೆಸೇಜ್ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ . ಪ್ರಸ್ತುತ ಪ್ರಕರಣದ ತನಿಖೆ ಆರಂಭವಾಗಿದ್ದು, ಆರೋಪ ಸಾಬೀತಾದಲ್ಲಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಪೊಲೀಸ್ ಇಲಾಖೆ ತಿಳಿಸಿದೆ …
