ashwaveega news 24×7ಮಾರ್ಚ್26.2026 ಬೆಂಗಳೂರು: 19ನೇ ಸೀಸನ್ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಇದೇ ಮಾರ್ಚ್ 28ರಿಂದ ಐಪಿಎಲ್ ಟೂರ್ನಿ ಆರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯ ವಹಿಸಿದೆ. ಈ ಪಂದ್ಯದ ಟಿಕೆಟ್ ಕೆಲವೇ ನಿಮಿಷಗಳಲ್ಲಿ ಸೋಲ್ಡೌಟ್ ಆಗಿವೆ. ಇನ್ನು ಇದೆಲ್ಲದರ ನಡುವೆ ಇಂದು ವಿಧಾನಸೌಧದಲ್ಲೂ ಐಪಿಎಲ್ ಟಿಕೆಟ್ ಕುರಿತಾದ ಚರ್ಚೆ ಜೋರಾಗಿಯೇ ನಡೆದಿದೆ.

ನಮಗೆ ಐಪಿಎಲ್ ಮ್ಯಾಚ್ ನೋಡಲು ಸರಿಯಾಗಿ ಟಿಕೆಟ್ ಸಿಗುತ್ತಿಲ್ಲ, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶಾಸಕರಿಗೆ ಅಗೌರವವಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಅಸಮಾಧಾನ ಹೊರಹಾಕಿದ್ದಾರೆ. ‘ಕ್ರಿಕೆಟ್ನವರಿಗೆ ದುಡ್ಡಿಗೇನು ಕೊರತೆನಾ? ಶಾಸಕರಾದ ನಮಗೆ ಅಲ್ಲಿ ಒಂದು ಪಾಸ್ ಕೊಡಲ್ಲ ಎಂದು ಆರ್ ಅಶೋಕ್ ಕಿಡಿಕಾರಿದ್ದಾರೆ.
ಕ್ರಿಕೆಟ್ ಸ್ಟೇಡಿಯಂ ಕಟ್ಟೋಕೆ ಸರ್ಕಾರದ ಹಣ ಬೇಕು. ಜಾಗ ಕೊಟ್ಟಿರೋದು ಕ್ರಿಕೆಟ್ ಅಭ್ಯಾಸ ಮಾಡೋಕೆ ಹಾಗೂ ಕ್ರಿಕೆಟ್ ಆಡೋಕೆ. ಆದರೆ ಅಲ್ಲಿ ಎಣ್ಣೆ ಹೊಡಿಯೋಕೆ ಅವಕಾಶ ಮಾಡಿ ಕೊಟ್ಟಿದ್ದಾರೆ. ಇದನ್ನೆಲ್ಲಾ ಟೈಟ್ ಮಾಡಿ, ಆಗ ಬಾಯಿ ಮುಚ್ಚಿಕೊಂಡು ಬರುತ್ತಾರೆ ಎಂದು ಆರ್ ಅಶೋಕ್ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
