ashwaveega news 24×7ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷ ನಾಲ್ಕನೇ ವಾರಕ್ಕೆ ಕಾಲಿಟ್ಟಿರುವ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಮಾ.27) ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ.
ಈ ಮೂಲಕ ಸಭೆಯಲ್ಲಿ ದೇಶದ ಒಟ್ಟಾರೆ ಸಿದ್ಧತೆ ಮತ್ತು ಯೋಜನೆಗಳನ್ನು ಪರಿಶೀಲಿಸುವ ಮುಖ್ಯ ಉದ್ದೇಶವನ್ನು ಹೊಂದಿದೆ. ಆದರೆ ಏಪ್ರಿಲ್ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಕೆಲ ರಾಜ್ಯಗಳ ಮುಖ್ಯಮಂತ್ರಿಗಳು ನೀತಿ ಸಂಹಿತೆ ಕಾರಣದಿಂದ ಈ ಸಭೆಯಲ್ಲಿ ಭಾಗವಹಿಸುವುದಿಲ್ಲ. ಹೀಗಾಗಿ ಬದಲಿಗೆ, ಆ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳೊಂದಿಗೆ ಪ್ರತ್ಯೇಕ ಸಭೆಯನ್ನು ಶೀಘ್ರದಲ್ಲೇ ನಡೆಸಲು ಯೋಜನೆಯಿದೆ.

ಇನ್ನೂ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಬದಲಾಗಿ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಭಾಗಿಯಾಗಲಿದ್ದಾರೆ.
ಇದಕ್ಕೂ ಮುನ್ನ ಭಾನುವಾರ (ಮಾ.22) ಪ್ರಧಾನ ಮಂತ್ರಿಯವರು ಭದ್ರತೆ ಕುರಿತು ಸಂಪುಟ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ, ಪಶ್ಚಿಮ ಏಷ್ಯಾದ ಪರಿಸ್ಥಿತಿ ಮತ್ತು ಸಂಘರ್ಷ ಮುಂದುವರಿದರೆ ಭಾರತದ ಸನ್ನದ್ಧತೆಯನ್ನು ಪರಿಶೀಲಿಸಿದರು. ಸಭೆಯಲ್ಲಿ, ಸಂಘರ್ಷದ ಪರಿಣಾಮಗಳಿಂದ ಭಾರತೀಯರನ್ನು ರಕ್ಷಿಸಬೇಕು ಎಂದು ಸೂಚನೆ ನೀಡಿದರು.
