Ashwaveega News 24×7 ಮಾರ್ಚ್ 30 – 2026 : ಬೆಳಗಾವಿ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಸಹೋದರಿಯರು ದುರ್ಘಟನೆಯಲ್ಲಿ ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ.
ರಾಯಬಾಗ ತಾಲೂಕಿನ ಮೇಖಳಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಶಾಲೆಯಿಂದ ಮನೆಗೆ ಬರುತ್ತಿದ್ದ ವೇಳೆ, ರಸ್ತೆ ದಾಟುತ್ತಿದ್ದ ಇಬ್ಬರು ಬಾಲಕಿಯರ ಮೇಲೆ ಕಾರು ಹರಿದ ಪರಿಣಾಮ ಗಂಭೀರ ಗಾಯಗಳಾಗಿವೆ.
ಮೃತರನ್ನು ಜನಶ್ರೀ ಕೋಟಾರೆ (11) ಮತ್ತು ಭಾಗ್ಯಶ್ರೀ ಕೋಟಾರೆ (13) ಎಂದು ಗುರುತಿಸಲಾಗಿದೆ.

ಅಪಘಾತ ಸಂಭವಿಸಿದ ಕ್ಷಣದಲ್ಲೇ ಜನಶ್ರೀ ಕೋಟಾರೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡ ಭಾಗ್ಯಶ್ರೀ ಅವರನ್ನು ತಕ್ಷಣವೇ ಬೆಳಗಾವಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಅವರು ಕೂಡ ಮೃತಪಟ್ಟಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
