Ashwaveega News 24×7 ಮಾರ್ಚ್ 30 – 2026 : ಬೆಳಗಾವಿ : ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಳೆ ಗುಡಗನಟ್ಟಿ ಗ್ರಾಮದ ಬಳಿ ಇರುವ ಹಿಡಕಲ್ ಜಲಾಶಯದ ಹಿನ್ನೀರಿನಲ್ಲಿ ನಡೆದ ದುರಂತದಲ್ಲಿ ಇಬ್ಬರು ಬಾಲಕರು ಮೃತಪಟ್ಟಿದ್ದಾರೆ .
ಶಾಲೆಗೆ ರಜೆ ಇರುವ ಹಿನ್ನೆಲೆ ಐದು ಮಂದಿ ಸ್ನೇಹಿತರು ಈಜಲು ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಈ ವೇಳೆ ನೀರಿನಲ್ಲಿ ಮುಳುಗಿದ ಕೃಷ್ಣಾ ಖಾನಾಪೂರಿ (14) ಮತ್ತು ಪ್ರಜ್ವಲ್ ಗೋಕಾರ (14) ಮೃತಪಟ್ಟಿದ್ದಾರೆ. ಮೃತ ಬಾಲಕರು ದಾದಾಬನಟ್ಟಿ ಗ್ರಾಮದ ನಿವಾಸಿಗಳಾಗಿದ್ದಾರೆ .

ಘಟನೆ ತಿಳಿದ ತಕ್ಷಣ ಯಮನಮರಡಿ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ, ನದಿಯಿಂದ ಶವಗಳನ್ನು ಹೊರತೆಗೆದರು. ಬಳಿಕ ಯಮಕನಮರಡಿ ಪೊಲೀಸರೂ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ .
ಈ ಸಂಬಂಧ ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ .
