Ashwaveega News 24×7 ಏಪ್ರಿಲ್ 1 – 2026 : ಬೈಎಲೆಕ್ಷನ್ ರಾಜಕೀಯ ಕಣ ದಿನೇದಿನೇ ರಂಗೇರುತ್ತಿರುವ ನಡುವೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಖಾಸಗಿ ಸರ್ವೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ .
“ಶಾಕಿಂಗ್ ರಿಪೋರ್ಟ್” ಎಂದು ಹೇಳಲಾಗುತ್ತಿರುವ ಈ ಸಮೀಕ್ಷೆಯಲ್ಲಿ ಕಾಂಗ್ರೆಸ್ಗೆ ಭಾರೀ ಮುನ್ನಡೆ ಸಿಗಲಿದೆ ಎನ್ನುವ ಅಂಕಿಅಂಶಗಳು ಹೊರಬಿದ್ದಿವೆ. ಉಪಚುನಾವಣೆಯಲ್ಲಿ “ಕೈ” ಹಿಡಿಯಲು ಜನರು ಸಿದ್ಧರಾಗಿದ್ದಾರೆ ಎಂಬ ವಿಶ್ವಾಸವನ್ನು ಡಿಕೆಶಿ ವ್ಯಕ್ತಪಡಿಸಿದ್ದಾರೆ .
ತಮ್ಮದೇ ಮೇಲ್ವಿಚಾರಣೆಯಲ್ಲಿ ನಡೆಸಿದ ಸಮೀಕ್ಷೆಯಲ್ಲಿ 79% ಜನರು ಕಾಂಗ್ರೆಸ್ಗೆ ಬೆಂಬಲ ಸೂಚಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ. ದಾವಣಗೆರೆ ಮತ್ತು ಬಾಗಲಕೋಟೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಭರ್ಜರಿ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂಬ ಭರವಸೆ ಕೂಡ ನೀಡಿದ್ದಾರೆ .
“ನಮ್ಮ ಸರ್ಕಾರದ ಗ್ಯಾರಂಟಿಗಳು ಜನರಿಗೆ ತಲುಪಿವೆ. ಅಭಿವೃದ್ಧಿ ಕಾರ್ಯಗಳನ್ನು ಗಮನಿಸಿ ಜನರು ಮತ ನೀಡುತ್ತಾರೆ,” ಎಂದು ಡಿಕೆಶಿ ಹೇಳಿದ್ದಾರೆ. ಜೊತೆಗೆ ಅಲ್ಪಸಂಖ್ಯಾತರ ರಕ್ಷಣೆ ನಮ್ಮ ಸರ್ಕಾರದ ಪ್ರಮುಖ ಕರ್ತವ್ಯವೆಂದು ಅವರು ಒತ್ತಿ ಹೇಳಿದ್ದಾರೆ.
ಬೈಎಲೆಕ್ಷನ್ ಪ್ರಚಾರದ ಬಗ್ಗೆ ಮಾತನಾಡಿದ ಅವರು, “ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದೇವೆ. ಕಾರ್ಯಕರ್ತರು ಈಗಾಗಲೇ ತಮ್ಮ ಜವಾಬ್ದಾರಿಯನ್ನು ಪ್ರಾರಂಭಿಸಿದ್ದಾರೆ …
ಒಟ್ಟಿನಲ್ಲಿ, ಈ ಸಮೀಕ್ಷೆ ಹೊರಬಂದ ನಂತರ ಉಪಚುನಾವಣಾ ಕಣ ಇನ್ನಷ್ಟು ಚುರುಕುಗೊಂಡಿದ್ದು, ಕಾಂಗ್ರೆಸ್ ಭಾರೀ ಗೆಲುವಿನ ನಿರೀಕ್ಷೆಯಲ್ಲಿ ಇದೆ. ಆದರೆ, ಈ ಅಂಕಿಅಂಶಗಳು ನೆಲಮಟ್ಟದಲ್ಲಿ ಎಷ್ಟು ನಿಜವಾಗುತ್ತವೆ ಎಂಬುದು ಫಲಿತಾಂಶದ ದಿನವೇ ಸ್ಪಷ್ಟವಾಗಲಿದೆ .
