Ashwaveega News 24×7 ಏಪ್ರಿಲ್ 2 – 2026 : Devanahalli ತಾಲೂಕಿನ ಟೋಲ್ ಗೇಟ್ ಸಮೀಪ ಇರುವ ಆಂಜನೇಯ ದೇಗುಲ ವಿಚಾರವಾಗಿ ಎರಡು ಗುಂಪುಗಳ ನಡುವೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿ, ಘರ್ಷಣೆ ನಡೆದಿದೆ.
ಈ ಪ್ರಕರಣದಲ್ಲಿ ಅರ್ಚಕ ಲೋಕನಾಥಚಾರಿ ಹಾಗೂ ಪ್ರಕಾಶ್ ಎಂಬವರ ನೇತೃತ್ವದ ಗುಂಪುಗಳ ನಡುವೆ ವಾಗ್ವಾದ ಉಂಟಾಗಿ, ನಂತರ ಅದು ತೀವ್ರ ಘರ್ಷಣೆಗೆ ತಿರುಗಿದೆ ಎಂದು ತಿಳಿದುಬಂದಿದೆ.
ಪರಿಸ್ಥಿತಿ ತೀವ್ರಗೊಂಡ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಜನರನ್ನು ನಿಯಂತ್ರಿಸಲು ಲಘು ಲಾಠಿ ಪ್ರಹಾರ ನಡೆಸಿದರು. ಲಾಠಿ ಬೀಸಿ ಗುಂಪುಗಳನ್ನು ಚದುರಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾದರು .
ಘಟನೆ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಪೊಲೀಸರು ಮುಂದಾಗಿದ್ದಾರೆ.
ಪ್ರಸ್ತುತ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಹೆಚ್ಚಿನ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದೆ.
