Ashwaveega News 24×7 ಏಪ್ರಿಲ್ 5 – 2026 : ಬೆಂಗಳೂರು : ರಾಜ್ಯದಲ್ಲಿ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ (HSRP) ಕುರಿತಾಗಿ ಹರಿದಾಡುತ್ತಿರುವ ವದಂತಿಗಳಿಗೆ ರಾಜ್ಯ ಸಾರಿಗೆ ಇಲಾಖೆ ಸ್ಪಷ್ಟನೆ ನೀಡಿದೆ. HSRP ನಂಬರ್ ಪ್ಲೇಟ್ ಕಡ್ಡಾಯವಲ್ಲ ಎಂಬ ಮಾಹಿತಿ ಸಂಪೂರ್ಣ ತಪ್ಪು ಎಂದು ಇಲಾಖೆ ತಿಳಿಸಿದೆ .
ಎಲ್ಲಾ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯವಾಗಿದ್ದು, ಇದರಿಂದ ಹಿಂದೆ ಸರಿಯುವ ಅವಕಾಶ ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೆಲವರು ಕೋರ್ಟ್ ತಡೆಯಾಜ್ಞೆ ಇದೆ ಎಂದು ಹರಡುವ ಸುದ್ದಿ ಕೂಡ ನಿಖರವಾಗಿಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ .
HSRP ನಂಬರ್ ಪ್ಲೇಟ್ಗೆ ಸಂಬಂಧಿಸಿದಂತೆ ಯಾವುದೇ ತಡೆಯಾಜ್ಞೆ ಹೊರಡಿಸಲಾಗಿದೆ ಎಂಬ ಅಧಿಕೃತ ಮಾಹಿತಿ ಇಲಾಖೆಗೆ ಬಂದಿಲ್ಲ. ಹೀಗಾಗಿ ಕೋರ್ಟ್ ತಡೆಯಾಜ್ಞೆ ಇದೆ ಎನ್ನುವುದು ಕೇವಲ ವದಂತಿ ಎಂದು ಅಧಿಕಾರಿಗಳು ಹೇಳಿದ್ದಾರೆ.
ವಾಹನ ಮಾಲೀಕರು ಗೊಂದಲಕ್ಕೀಡಾಗದೆ ತಕ್ಷಣವೇ HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳುವಂತೆ ಸಾರಿಗೆ ಇಲಾಖೆ ಮನವಿ ಮಾಡಿದೆ. ನಿಯಮ ಪಾಲಿಸದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂಬ ಎಚ್ಚರಿಕೆಯನ್ನೂ ನೀಡಿದೆ.
HSRP ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯವಾಗಿದ್ದು, ಇದಕ್ಕೆ ಯಾವುದೇ ವಿನಾಯಿತಿ ಇಲ್ಲ. ವದಂತಿಗಳಿಗೆ ಕಿವಿಗೊಡದೇ ನಿಯಮ ಪಾಲಿಸುವಂತೆ ಸಾರ್ವಜನಿಕರಿಗೆ ಕರೆ ನೀಡಲಾಗಿದೆ…
