Ashwaveega News 24×7 ಏಪ್ರಿಲ್ 8 – 2026 : ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಣೆಗೆ ದಿನಾಂಕ ನಿಗದಿಯಾಗಿದ್ದು, ನಾಳೆ ಮಧ್ಯಾಹ್ನ 3 ಗಂಟೆಗೆ ಅಧಿಕೃತ ವೆಬ್ಸೈಟ್ karresults.nic.in ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.
ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆಯ ಮೂಲಕ ಆನ್ಲೈನ್ನಲ್ಲಿ ಫಲಿತಾಂಶ ಪರಿಶೀಲಿಸಬಹುದು. ಫಲಿತಾಂಶ ಪ್ರಕಟವಾದ ಬಳಿಕ ಸಂಜೆ 6 ಗಂಟೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ವಿವರಗಳನ್ನು ಹಂಚಿಕೊಳ್ಳಲಿದ್ದಾರೆ.

ಈ ವರ್ಷದ ಪಿಯುಸಿ ಪರೀಕ್ಷೆಗಳು ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ರಾಜ್ಯದಾದ್ಯಂತ ನಡೆದಿದ್ದು, ಒಟ್ಟು 1,217 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ಈ ಬಾರಿ 7,10,363 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು ಎಂದು ರಾಜ್ಯ ಶಾಲಾ ಪರೀಕ್ಷಾ ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ನೀಡಿದೆ.
ಫಲಿತಾಂಶ ಪ್ರಕಟವಾಗುವ ಸಮಯದಲ್ಲಿ ವೆಬ್ಸೈಟ್ನಲ್ಲಿ ಹೆಚ್ಚಿನ ಭಾರ ಇರುವ ಸಾಧ್ಯತೆ ಇದ್ದು, ವಿದ್ಯಾರ್ಥಿಗಳು ಸಹನಶೀಲತೆಯಿಂದ ಪ್ರಯತ್ನಿಸುವಂತೆ ಸೂಚಿಸಲಾಗಿದೆ …
