Ashwaveega News 24×7 ಜೂನ್ 03 – 2026 ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಮತ್ತೆ ಸಚಿವ ಸಂಪುಟ ವಿಸ್ತರಣೆ ಹಾಗೂ ಪುನರ್ರಚನೆ ಚರ್ಚೆ ಜೋರಾಗಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಪ್ತ ವಲಯಕ್ಕೆ ಸೇರಿದ ನಾಯಕರಿಗೆ ಈ ಬಾರಿ ಅದೃಷ್ಟ ಒಲಿಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ರಾಜಕೀಯ ಪಡಸಾಲೆಯಲ್ಲಿ ಹರಿದಾಡುತ್ತಿರುವ ಮಾಹಿತಿಯ ಪ್ರಕಾರ, ಡಿಕೆಶಿ ಜೊತೆ ಒಟ್ಟು 14 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿಬರುತ್ತಿವೆ. ಈಗಾಗಲೇ 10ಕ್ಕೂ ಹೆಚ್ಚು ನಾಯಕರ ಹೆಸರುಗಳು ಬಲವಾಗಿ ಕೇಳಿಬರುತ್ತಿದ್ದು, ಉಳಿದ ಕೆಲ ಸ್ಥಾನಗಳಿಗೆ ತೀವ್ರ ಪೈಪೋಟಿ ನಡೆಯುತ್ತಿದೆ.
ಪ್ರದೇಶವಾರು ಸಮೀಕರಣ, ಜಾತಿ ಲೆಕ್ಕಾಚಾರ, ಹೈಕಮಾಂಡ್ನ ಸೂಚನೆ ಹಾಗೂ ಮುಂಬರುವ ಚುನಾವಣೆಗಳ ತಂತ್ರಗಾರಿಕೆಯನ್ನು ಗಮನದಲ್ಲಿಟ್ಟುಕೊಂಡು ಅಂತಿಮ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತಿದೆ . ಹೀಗಾಗಿ ಸಚಿವ ಸ್ಥಾನದ ನಿರೀಕ್ಷೆಯಲ್ಲಿರುವ ಹಲವಾರು ಶಾಸಕರು ದೆಹಲಿ ಮತ್ತು ಬೆಂಗಳೂರಿನಲ್ಲಿ ಲಾಬಿ ನಡೆಸುತ್ತಿದ್ದಾರೆ.
ಇತ್ತ ಕೆಲ ಹಾಲಿ ಸಚಿವರಿಗೆ ಕೊಕ್ ಬೀಳುವ ಸಾಧ್ಯತೆ ಇದೆ ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಕೇಳಿಬರುತ್ತಿವೆ. ಇದೇ ಕಾರಣಕ್ಕೆ ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಕುತೂಹಲ ಮತ್ತು ಆತಂಕ ಎರಡೂ ಹೆಚ್ಚಾಗಿದೆ.
ಕಾಂಗ್ರೆಸ್ ಹೈಕಮಾಂಡ್, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ನಡುವೆ ಹಲವು ಸುತ್ತಿನ ಚರ್ಚೆಗಳು ನಡೆದಿವೆ , ಅಂತಿಮ ನಿರ್ಧಾರ ಸದ್ಯದಲ್ಲೇ ಹೊರಬೀಳುವ ಸಾಧ್ಯತೆ ಇದೆ.
ಹಾಗಾದರೆ ಡಿಕೆಶಿ ತಂಡದಲ್ಲಿ ಸ್ಥಾನ ಪಡೆಯುವ ಆ 14 ಮಂದಿ ಯಾರು? ಯಾರಿಗೆ ಮಂತ್ರಿಗಿರಿ ಲಾಟರಿ? ಯಾರಿಗೆ ನಿರಾಸೆ? ಎನ್ನುವ ಕುತೂಹಲಕ್ಕೆ ಇನ್ನೇನು ಕೆಲವೇ ದಿನಗಳಲ್ಲಿ ಉತ್ತರ ಸಿಗುವ ಸಾಧ್ಯತೆ ಇದೆ.
ರಾಜ್ಯ ರಾಜಕಾರಣದ ಈ ಹೈವೋಲ್ಟೇಜ್ ಬೆಳವಣಿಗೆಯ ಮೇಲೆ ಎಲ್ಲರ ಕಣ್ಣು ನೆಟ್ಟಿದ್ದು, ಸಚಿವ ಸಂಪುಟ ವಿಸ್ತರಣೆ ಯಾವಾಗ ಎಂಬುದೇ ಈಗ ಮಿಲಿಯನ್ ಡಾಲರ್ ಪ್ರಶ್ನೆಯಾಗಿದೆ.
