Ashwaveega News 24×7 ಜೂನ್ 03 – 2026 ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ಆಗಿದೆ ..
ರಾಜಕೀಯ ಸಂಪ್ರದಾಯದಂತೆ ಹಿರಿಯ ನಾಯಕರನ್ನು ಭೇಟಿ ಮಾಡಿ ಆಶೀರ್ವಾದ ಪಡೆಯುವ ನಡೆ ಮುಂದುವರಿಸಿರುವ ಡಿ.ಕೆ. ಶಿವಕುಮಾರ್, ದೊಡ್ಡಗೌಡರ ನಿವಾಸದಲ್ಲಿ ಕೆಲ ಕಾಲ ಮಾತುಕತೆ ನಡೆಸಿದರೆಂದು ತಿಳಿದುಬಂದಿದೆ .
ರಾಜ್ಯದ ರಾಜಕೀಯ ಬೆಳವಣಿಗೆಗಳ ನಡುವೆ ನಡೆದ ಈ ಭೇಟಿ ಹಲವು ಕುತೂಹಲಗಳಿಗೆ ಕಾರಣವಾಗಿದೆ. ಕಾಂಗ್ರೆಸ್, ಜೆಡಿಎಸ್ ಹಾಗೂ ಇತರ ರಾಜಕೀಯ ಪಕ್ಷಗಳ ನಾಯಕರು ಈ ಬೆಳವಣಿಗೆಯನ್ನು ಕುತೂಹಲದಿಂದ ಗಮನಿಸುತ್ತಿದ್ದಾರೆ .
ಇತ್ತ ಸಾಮಾಜಿಕ ಜಾಲತಾಣಗಳಲ್ಲೂ ಡಿಕೆಶಿ – ದೇವೇಗೌಡರ ಭೇಟಿ ಭಾರೀ ವೈರಲ್ ಆಗಿದ್ದು, ಹಲವರು ಇದನ್ನು ರಾಜಕೀಯ ಸೌಜನ್ಯದ ನಡೆ ಎಂದು ವಿಶ್ಲೇಷಿಸಿದರೆ, ಇನ್ನೂ ಕೆಲವರು ಇದರ ರಾಜಕೀಯ ಮಹತ್ವದ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ.
ಒಟ್ಟಿನಲ್ಲಿ ಪ್ರಮಾಣ ವಚನಕ್ಕೂ ಮುನ್ನ ನಡೆದ ಈ ಭೇಟಿ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದ್ದು, ಮುಂದಿನ ದಿನಗಳಲ್ಲಿ ಇದರ ಕುರಿತು ಇನ್ನಷ್ಟು ಸ್ಪಷ್ಟತೆ ಸಿಗುವ ಸಾಧ್ಯತೆ ಇದೆ.

