
ಗದಗ: ಮೂಡಾ ಹಗರಣ ಖಂಡಿಸಿ ಬಿಜೆಪಿ ಕಾರ್ಯಕರ್ತರು ಗದಗ ಜಿಲ್ಲಾಡಳಿತ ಭವನದ ಎದುರು ಭಾರೀ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾಕಾರರು ರಸ್ತೆ ತಡೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದು, ಕೆಲಹೊತ್ತು ಸಂಚಾರ ಅಸ್ತವ್ಯಸ್ತಗೊಂಡಿತು.
ಬಿಜೆಪಿ ಕಾರ್ಯಕರ್ತರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂಬ ಕೂಗಾಟದೊಂದಿಗೆ ಪ್ರತಿಭಟನೆಯನ್ನು ಮುಂದುವರಿಸಿದರು. ಪರಿಷತ್ ಸದಸ್ಯ ಐವಾನ್ ಡಿಸೋಜಾ ಅವರು “ಬಾಂಗ್ಲಾ ರೀತಿ ರಾಜಭವನಕ್ಕೆ ನುಗ್ಗೋಣ” ಎಂಬ ಹೇಳಿಕೆಗೆ ಪ್ರತಿಸ್ಪಂದಿಸುತ್ತಾ, ಕಾಂಗ್ರೆಸ್ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯ ಬಳಿಕ, ಬಿಜೆಪಿ ಮುಖಂಡರು ಜಿಲ್ಲಾಧಿಕಾರಿಗಳ ಮೂಲಕ ತಮ್ಮ ಮನವಿಯನ್ನು ಸಲ್ಲಿಸಿದರು.