
ಗಣೇಶ್ ಹಬ್ಬ ಹತ್ತಿರಬರುತ್ತಿರುವುದರಿಂದ, ರಾಜ್ಯ ಸರ್ಕಾರ ಪರಿಸರ ಸಂರಕ್ಷಣೆ ಮತ್ತು ಸಾರ್ವಜನಿಕ ಸುರಕ್ಷತೆಯನ್ನು ದೃಷ್ಟಿಯಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದೆ. ಪ್ಲಾಸ್ಟರ್ ಆಫ್ ಪ್ಯಾರಿಸ್ (POP) ಗಣೇಶ ಮೂರ್ತಿಗಳು ಮತ್ತು ಪಟಾಕಿಗಳ ಬಳಕೆ, ಸಾಗಾಟ, ಮಾರಾಟ, ಹಾಗೂ ವಿಸರ್ಜನೆ ಬಗ್ಗೆ ನಿಷೇಧ ಹೇರಲು ಸರ್ಕಾರ ತೀರ್ಮಾನಿಸಿದೆ.
ಅರಣ್ಯ ಸಚಿವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ, ಪರಿಸರ ಸ್ನೇಹಿ ಗಣಪತಿ ಮತ್ತು ಹಸಿರು ಪಟಾಕಿಗಳ ಬಳಕೆಯನ್ನು ಉತ್ತೇಜಿಸಲು, ರಾಜ್ಯಾದ್ಯಂತ ಕ್ರಮ ಕೈಗೊಳ್ಳುವ ಕುರಿತು ಚರ್ಚಿಸಲಾಯಿತು. ಈ ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ದೀಪಾ ಚೋಳನ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು, ಮತ್ತು ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ಭಾಗವಹಿಸಿದ್ದರು.
ಸಭೆಯಲ್ಲಿ ಹಲವು ಕ್ರಮಗಳ ಬಗ್ಗೆ ಸವಿವರವಾಗಿ ಚರ್ಚೆ ನಡೆಯಿತು, ಪ್ರತಿ ಜಿಲ್ಲೆಯಲ್ಲಿ ಈ ನಿರ್ಣಯಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವ ಕುರಿತು ನಿರ್ಣಯ ಮಾಡಲಾಯಿತು.