ಕೊಲೆ ಆರೋಪದಲ್ಲಿ ನಟ ದರ್ಶನ್ ಜೈಲು ಸೇರಿದ್ದು, ಅಲ್ಲಿ ಅವರಿಗೆ ರಾಜಾತಿಥ್ಯ ಸಿಗುತ್ತಿದೆಯಾ ಎಂಬ ಅನುಮಾನ ಮೂಡಿದೆ. ಯಾಕೆಂದರೆ, ದರ್ಶನ್ ಅವರ ಒಂದು ಫೋಟೋ ವೈರಲ್ ಆಗಿದೆ. ಅದರಲ್ಲಿ ಅವರು ಸಿಗರೇಟು ಸೇದುತ್ತಾ, ಕಾಫಿ ಕುಡಿಯುತ್ತಿರುವ ದೃಶ್ಯ ಸೆರೆಯಾಗಿದೆ. ವೈರಲ್ ಆಗಿರುವ ಫೋಟೋದಿಂದ ಅನೇಕ ಅನುಮಾನಗಳು ಮೂಡಲು ಆರಂಭಿಸಿವೆ. ರೇಣುಕಾಸ್ವಾಮಿ ಎಂಬ ವ್ಯಕ್ತಿಯನ್ನು ಕೊಲೆ ಮಾಡಿಸಿದ ಆರೋಪ ದರ್ಶನ್ ಮೇಲಿದೆ. ಹಾಗಾಗಿ ಅವರನ್ನು ಪರಪ್ಪನ ಅಗ್ರಹಾರದ ಸ್ಪೆಷಲ್ ಬ್ಯಾರಕ್ನಲ್ಲಿ ಇರಿಸಲಾಗಿದೆ. ಅಲ್ಲಿ ಅವರು ಆರಾಮಾಗಿ ದಿನ ಕಳೆಯುತ್ತಿರುವಂತಿದೆ.
ದರ್ಶನ್ ಅವರು ಸ್ಪೆಷಲ್ ಬ್ಯಾರಕ್ನಿಂದ ಹೊರಬಂದು, ಮೂವರ ಜೊತೆ ಕುಳಿತು ಹರಟೆ ಹೊಡೆಯುತ್ತಿದ್ದಾರೆ. ಕಾಫಿ ಮಗ್ ಹಿಡಿದುಕೊಂಡು ಅವರು ಕುಳಿತಿದ್ದಾರೆ. ಕೈಯಲ್ಲಿ ಸಿಗರೇಟ್ ಕೂಡ ಇದೆ. ಈ ಫೋಟೋ ವೈರಲ್ ಆಗಿದೆ. ಇನ್ನೂ ಯಾವೆಲ್ಲ ಸೌಕರ್ಯಗಳನ್ನು ನಟನಿಗೆ ನೀಡಿರಬಹುದು ಎಂಬ ಪ್ರಶ್ನೆಯನ್ನು ಈ ಫೋಟೋ ಹುಟ್ಟುಹಾಕಿದೆ. ಜೈಲು ಅಧಿಕಾರಿಗಳ ನಡೆಯ ಬಗ್ಗೆ ಅನುಮಾನ ಮೂಡುವಂತಾಗಿದೆ.