ಕೋಲಾರ : ಶ್ರಾವಣ ಮಾಸದ ಕೊನೆ ಶನಿವಾರದ ಹಿನ್ನೆಲೆ, ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಚಿಕ್ಕ ತಿರುಪತಿಯ ಶ್ರೀ ಪ್ರಸನ್ನ ಲಕ್ಷ್ಮೀ ವೆಂಕಟೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಮತ್ತು ಅಲಂಕಾರ ಕೈಗೊಳ್ಳಲಾಗಿದೆ. ದೇವರ ದರ್ಶನಕ್ಕಾಗಿ ಬೆಳಿಗ್ಗೆಯಿಂದಲೇ ಭಕ್ತರು ದೇವಾಲಯಕ್ಕೆ ಹರಿದು ಬರುತ್ತಿದ್ದಾರೆ. ಕರ್ನಾಟಕ ಹಾಗೂ ತಮಿಳುನಾಡು ಸೇರಿದಂತೆ ವಿವಿಧ ಭಾಗಗಳಿಂದ ಭಕ್ತರು ಆಗಮಿಸುತ್ತಿದ್ದು, ವಿಶೇಷ ಪೂಜೆ, ದೇವರ ಅಲಂಕಾರ ಹಾಗೂ ದರ್ಶನದ ಮೂಲಕ ಪುನೀತರಾಗುತ್ತಿದ್ದಾರೆ.