ಬೆಂಗಳೂರು: ಆಭರಣ ಪ್ರಿಯರಿಗೆ ಮತ್ತೆ ಶಾಕ್ ನೀಡುವಂತೆ, ಚಿನ್ನದ ಬೆಲೆಯಲ್ಲಿ ಮತ್ತೆ ಬಾರೀ ಪ್ರಮಾಣದಲ್ಲಿ ಏರಿಕೆ ಕಂಡುಬಂದಿದೆ. ಕಳೆದ ಎರಡು ತಿಂಗಳಲ್ಲಿ ಗರಿಷ್ಠ ಮಟ್ಟಕ್ಕೆ ಬೆಲೆ ಏರಿಕೆಯಾಗಿದೆ. 10 ಗ್ರಾಂ ಚಿನ್ನದ ಬೆಲೆ 1,200 ರೂಪಾಯಿ ಏರಿಕೆಯಾಗಿದ್ದು, ಈಗಾಗಲೇ 10 ಗ್ರಾಂ ಚಿನ್ನದ ಮೌಲ್ಯ ₹75,550 ಆಗಿದೆ.
ಸಹನೆ ಇಲ್ಲದೆ ಬೆಳ್ಳಿ ಬೆಲೆಯಲ್ಲೂ ಏರಿಕೆಯಾಗಿದೆ. ಕಳೆದ ನಾಲ್ಕು ದಿನಗಳಲ್ಲಿ ಬೆಳ್ಳಿ ಬೆಲೆ ₹5,200 ಏರಿಕೆಯಾಗಿ, ಪ್ರಸ್ತುತ 1 ಕೆಜಿ ಬೆಳ್ಳಿಗೆ ₹89,000 ರೂಪಾಯಿ ಮೌಲ್ಯ ಬಂದು ನಿಂತಿದೆ.
ಅಮೇರಿಕದ ಫೆಡರಲ್ ರಿಸರ್ವ್ ಬ್ಯಾಂಕ್ ಬಡ್ಡಿ ದರವನ್ನು ಕಡಿತಗೊಳಿಸುವ ಸಾಧ್ಯತೆಗಳು ಹೆಚ್ಚಾಗಿರುವ ಕಾರಣ, ಮುಂದಿನ ದಿನಗಳಲ್ಲಿ ಡಾಲರ್ ಮೌಲ್ಯ ಕುಸಿಯುವ ನಿರೀಕ್ಷೆಯಿದೆ. ಇದಲ್ಲದೆ, ಭಾರತದಲ್ಲಿ ಹಬ್ಬದ ಋತುವು ಪ್ರಾರಂಭವಾಗಿರುವುದರಿಂದ ಚಿನ್ನದ ಮತ್ತು ಬೆಳ್ಳಿಯ ದರದಲ್ಲಿ ಏರಿಕೆ ಕಂಡುಬಂದಿದೆ ಎಂದು ತಜ್ಞರು ಅಂದಾಜಿಸಿದ್ದಾರೆ.