ಈ ಬಾರಿಯ ದಸರಾ ಉತ್ಸವದಲ್ಲಿ ಮೈಸೂರಿನ 21 ದಿನಗಳ ಕಾಲ ವಿದ್ಯುತ್ ದೀಪಾಲಂಕಾರ ವಿಶೇಷ ಆಕರ್ಷಣೆಯಾಗಿ ನಡೆಯಲಿದೆ. ದಸರಾ ಮುಗಿದ ಬಳಿಕವೂ ಹತ್ತು ದಿನಗಳ ಕಾಲ ದೀಪಾಲಂಕಾರ ವಿಸ್ತರಿಸಲಾಗಿದ್ದು, ಮೈಸೂರು ನಗರ ಹಾಗೂ ಸುತ್ತಮುತ್ತ 130 ಕಿ.ಮೀ. ವ್ಯಾಪ್ತಿಯಲ್ಲಿ ಬೆಳಕು ಹಂಚಲಿದೆ.
ಜಂಬೂಸವಾರಿ ಮೆರವಣಿಗೆಯಲ್ಲಿ ವಿಶೇಷ ವಿದ್ಯುತ್ ರಥ ಸ್ಥಬ್ದಚಿತ್ರವನ್ನು ಸಹ ಸಾಗಿಸಲಾಗುತ್ತದೆ. ಅಕ್ಟೋಬರ್ 6, 7, 11, 12ರಂದು ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ 4 ದಿನಗಳ ಕಾಲ ಡ್ರೋನ್ ಶೋ ಆಯೋಜನೆಗೂ ಸಿದ್ಧತೆ ನಡೆದಿದೆ.
ಮೈಸೂರು ವೃತ್ತಗಳಲ್ಲಿ ಪ್ರಜಾಪ್ರಭುತ್ವ ಸಾಗಿ ಬಂದ ಹಾದಿ, ತಾಯಿ ಭುವನೇಶ್ವರಿ, ಸೋಮನಾಥೇಶ್ವರ ದೇವಾಲಯ ಸೇರಿದಂತೆ ಮೈಸೂರಿನ ಮಹಾರಾಜರ ಪ್ರತಿಮೆಗಳ ವಿದ್ಯುತ್ ದೀಪಾಲಂಕಾರವು ಈ ಬಾರಿಯ ದಸರಾಕ್ಕೆ ವಿಶೇಷ ಮೆರುಗು ನೀಡಲಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ. ಮಹಾದೇವಪ್ಪ ಅವರು ಮಾಹಿತಿ ನೀಡಿದ್ದಾರೆ.