ಮೈಸೂರು : ವಿರೋಧ ಪಕ್ಷಗಳಿಗೆ ಸಿಎಂ ಬದಲಾವಣೆ ಮಾಡಿಸುವುದೇ ಕೆಲಸ ಎಂದು ಸಚಿವ ಜಿ ಪರಮೇಶ್ವರ್ ಆಕ್ರೋಶ ಹೊರ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಸಚಿವ ಜಿ ಪರಮೇಶ್ವರ್ ನಾವು ಮಹದೇವಪ್ಪ ಮನೆಯಲ್ಲಿ ಡಿನ್ನರ್ ಏರ್ಪಾಡು ಮಾಡಲಾಗಿತ್ತು. ಊಟಕ್ಕೆ ಹೋಗಿದ್ದೆವು. ಯಾವ ಮೀಟಿಂಗ್ ಇಲ್ಲ, ಡಿನ್ನರ್ ಅಷ್ಟೇ. ಮೈಸೂರಿನ ಆತಿಥ್ಯ ಬಿಡುವುದಕ್ಕೆ ಆಗುತ್ತಾ? ಅದಕ್ಕೆ ಯಾವುದೇ ಅರ್ಥ ಕಲ್ಪಿಸುವ ಅಗತ್ಯ ಇಲ್ಲ, ಯಾವುದೇ ರಾಜಕೀಯ ಚರ್ಚೆ ಆಗಿಲ್ಲ, ಸಹಜವಾಗಿ ಊಟಕ್ಕೆ ಸೇರಿದ್ದೆವು ಎಂದು ಹೇಳಿದ್ದಾರೆ.
ಇನ್ನೂ ಡಿನ್ನರ್ನಲ್ಲಿ ನಾನು, ಸತೀಶ್ ಜಾರಕಿಹೊಳಿ, ಮಹದೇವಪ್ಪ, ಹಾಗೂ ಶಾಸಕ ಎ.ಆರ್ ಕೃಷ್ಣ ಮೂರ್ತಿ ಭಾಗಿಯಾಗಿದ್ದೆವು. ಯಾವುದೇ ರಾಜಕೀಯ ಚರ್ಚೆ ಆಗಿಲ್ಲ, ಊಟದ ವೇಳೆಯು ಸಿಎಂ ಬದಲಾವಣೆ ಅದು ಇದು ಯಾವ ವಿಚಾರವೂ ಚರ್ಚೆ ಮಾಡಿಲ್ಲ, ಅದ್ರೆ ವಿರೋಧ ಪಕ್ಷಗಳಿಗೆ ಸಿಎಂ ಬದಲಾವಣೆ ಮಾಡಿಸುವುದೇ ಕೆಲಸ, ಆದರೆ ಕಾಂಗ್ರೆಸ್ನಲ್ಲಿ ಯಾವ ಬದಲಾವಣೆ ಬಗ್ಗೆಯೂ ಚರ್ಚೆ ಆಗಿಲ್ಲ ಎಂದು ಕಿಡಿಕಾರಿದ್ದಾರೆ.
ಸಿಎಂ ಬದಲಾವಣೆ ಇಲ್ಲ. ಸಿದ್ದರಾಮಯ್ಯ ರಾಜೀನಾಮೆ ಕೊಡುವ ಅಗತ್ಯ ಇಲ್ಲ. ನಾವು ಆಗಾಗ ಈ ರೀತಿ ಸೇರುತ್ತಿರುತ್ತೇವೆ. ಅದಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯ ಇಲ್ಲ. 5 ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ ಎಂದು ತಿಳಿಸಿದರು.
ಇದನ್ನೂ ಓದಿ : https://ashwaveega.com/cm-siddaramaiah-legal-issues/